ಅತ್ಯಾಚಾರ ಆರೋಪ: ನೇಪಾಳ ಸ್ಪೀಕರ್ ರಾಜೀನಾಮೆ

ಫೆಡರಲ್ ಪಾರ್ಲಿಮೆಂಟ್ ಸೆಕ್ರೆಟರಿಯಟ್  ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನೇಪಾಳ ಸಂಸತ್ತಿನ ಸ್ಪೀಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನೇಪಾಳ ಸ್ಪೀಕರ್
ನೇಪಾಳ ಸ್ಪೀಕರ್

ಕಠ್ಮಂಡು: ಫೆಡರಲ್ ಪಾರ್ಲಿಮೆಂಟ್ ಸೆಕ್ರೆಟರಿಯಟ್  ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನೇಪಾಳ ಸಂಸತ್ತಿನ ಸ್ಪೀಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಸ್ಪೀಕರ್ ಕೃಷ್ಣ ಬಹದೂರ್  ಮಹರಾ, ಉಪ  ಸ್ಪೀಕರ್ ಶಿವಮಯ ತುಂಬಹಂಫೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ರೀತಿಯಲ್ಲಿ ತನಿಖೆ ನಡೆಸುವುದಾಗಿ ಮಹರಾ, ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. 

ಹಮ್ರೋ ಕುರಾ ಆನ್ ಲೈನ್ ನ್ಯೂಸ್ ಪೋರ್ಟಲ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ ಮಹಿಳೆ, ಹಲವು ವರ್ಷಗಳಿಂದ ಸ್ಪೀಕರ್ ಗೊತ್ತು, ಅವರು ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಸೆಪ್ಟೆಂಬರ್ 23 ರಂದು ಬಾಡಿಗೆ ಮನೆಯಲ್ಲಿ ಒಬ್ಬಳೇ ಇರುವಾಗ ಮನೆಗೆ ಬಂದು ಅತ್ಯಾಚಾರ ನಡೆಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದಾಗ ತಮ್ಮನ್ನು ನಿಂದಿಸಿದ್ದಾರೆ ಎಂದು  ಆರೋಪ ಮಾಡಿದ್ದಾರೆ. ಆದರೆ ಈ ಆರೋಪನ್ನು ಸ್ಪೀಕರ್ ಈ ಹಿಂದೆ ನಿರಾಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com