ಇರಾಕ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ: ಸಾವಿನ ಸಂಖ್ಯೆ 104ಕ್ಕೆ ಏರಿಕೆ, 6,000ಕ್ಕೂ ಹೆಚ್ಚು ಮಂದಿಗೆ ಗಾಯ

ತೈಲ ಸಮೃದ್ಧ ದೇಶ ಇರಾಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೈರೋ: ತೈಲ ಸಮೃದ್ಧ ದೇಶ ಇರಾಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. 

ಬಾಗ್ದಾದ್ ಮತ್ತು ಕೆಲವು ಪ್ರಾಂತ್ಯಗಳಲ್ಲಿ ನಾಲ್ಕು ದಿನಗಳ ಕಾಲ ನಡೆದ ಪ್ರತಿಭಟನೆಯ ವೇಳೆ ಸಾವನ್ನಪ್ಪಿದವರ ಸಂಖ್ಯೆ ಭದ್ರತಾ ಸದಸ್ಯರು ಸೇರಿದಂತೆ 104ಕ್ಕೆರಿದೆ ಎಂದು ಇರಾಕ್ ಆಂತರಿಕ ಸಚಿವಾಲಯ ತಿಳಿಸಿದೆ. ಆದರೆ ಹೊಸ ಹಿಂಸಾಚಾರದಿಂದಾಗಿ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಇರಾಕ್‌ನ ಸುದ್ದಿ ಸಂಸ್ಥೆ ವೈಡ್ ತಿಳಿಸಿದೆ.

ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇದುವರೆಗೆ 6,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ರಾಜಧಾನಿ ಮತ್ತು ಇತರ ನಗರದಲ್ಲಿ ಪರಿಸ್ಥಿತಿ ಇನ್ನೂ ತಹಬದಿಗೆ ಬಂದಿಲ್ಲ ಎಂದು ತಿಳಿದುಬಂದಿದೆ. 

ನೂರಾರು ಇರಾಕಿ ಪ್ರಜೆಗಳು ಬಾಗ್ದಾದ್ ಮತ್ತು ಇತರ ಇರಾಕಿ ಪ್ರಾಂತ್ಯಗಳಲ್ಲಿ ಬೀದಿಗಿಳಿದು ಉತ್ತಮ ಜೀವನ, ಉದ್ಯೋಗಾವಕಾಶಗಳು ಮತ್ತು ಸರ್ಕಾರದಿಂದ ಮೂಲಭೂತ ಸೇವೆಗಳನ್ನು ಕೋರಿದ್ದಾರೆ.

ದೇಶದಲ್ಲಿ ಭಷ್ಟ್ರಾಚಾರ, ನಿರುದ್ಯೋಗ ಸಮಸ್ಯೆ ನಿವಾರಿಸಬೇಕು, ಯುವಕರಿಗೆ ಉದ್ಯೋಗ ನೀಡಬೇಕು, ಸಾರ್ವಜನಿಕರಿಗೆ ಸಾರ್ವಜನಿಕ ಸೇವೆಯನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದೇಶದ ಮೂಲೆ ಮೂಲೆಗಳಲ್ಲಿ  ಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.

ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿದ್ದು, ಭದ್ರತಾ ಪಡೆ ಅಶ್ರುವಾಯು, ಜಲಫಿರಂಗಿ ಬಳಸಿ ಪ್ರತಿಭಟನಕಾರರನ್ನು ಚದುರಿಸಲು ಪ್ರಯತ್ನಿಸುತ್ತಿದೆ.ಭಾನುವಾರ ರಾತ್ರಿ ಕೂಡ ಇರಾಕ್‌ನಾದ್ಯಂತ ಭದ್ರತಾ ಪಡೆಗಳೊಂದಿಗೆ ನಡೆದ ಹೊಸ ಘರ್ಷಣೆಯಲ್ಲಿ ಹಲವು ಪ್ರತಿಭಟನಕಾರರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳ ವರದಿಗಳು ತಿಳಿಸಿವೆ.

ಇರಾಕ್ ರಾಜಧಾನಿಯ ಮಧ್ಯ ಮತ್ತು ಪೂರ್ವಭಾಗದಲ್ಲಿ ಹೊಸದಾಗಿ ಸಾವುನೋವುಗಳು ವರದಿಯಾಗಿದ್ದು, ತಹ್ರಿರ್ ಚೌಕದ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com