ಐಎಂಎಫ್ ಏನೇ ಹೇಳಲಿ, ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ: ನಿರ್ಮಲಾ ಸೀತಾರಾಮನ್

ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ವಾಷಿಂಗ್ಟನ್; ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದಲ್ಲಿ ಆರ್ಥಿಕಾಭಿವೃದ್ಧಿ ದರ ಕಡಿಮೆಯಾಗಿದೆ ಎಂದು ಹೇಳಿದೆ, ಆದರೆ ನಮ್ಮ ದೇಶದ ಆರ್ಥಿಕತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ನಿನ್ನೆ ವಾಷಿಂಗ್ಟನ್ ನಲ್ಲಿ ಭಾರತೀಯ ಪತ್ರಕರ್ತರೊಂದಿಗೆ ಮಾತನಾಡುವಾಗ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


ಅವರು ವಾಷಿಂಗ್ಟನ್ ನಲ್ಲಿ ಐಎಎಂ ಮತ್ತು ವಿಶ್ವಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ಭಾಗವಹಿಸುತ್ತಿದ್ದು ಈ ಸಂದರ್ಭದಲ್ಲಿ ಸಹಜವಾಗಿ ಭಾರತದ ಆರ್ಥಿಕ ಕುಸಿತ ವಿಚಾರ ಚರ್ಚೆಗೆ ಬಂದಿದೆ. ಭಾರತ ಮತ್ತು ಚೀನಾ ದೇಶಗಳ ಆರ್ಥಿಕ ಬೆಳವಣಿಗೆ ಶೇಕಡಾ 6.1ರಷ್ಟಿದೆ ಎಂದು ಹೇಳಿದರೂ ನಾನು ಭಾರತವನ್ನು ಚೀನಾ ಜೊತೆ ಹೋಲಿಕೆ ಮಾಡಲು ಹೋಗುವುದಿಲ್ಲ. ಎಲ್ಲಾ ಜಾಗತಿಕ ಆರ್ಥಿಕತೆಯ ಅಭಿವೃದ್ಧಿ ದರವನ್ನು ಐಎಂಎಫ್ ಕಡಿಮೆ ಮಾಡಿ ಹೇಳಿದೆ. ಭಾರತಕ್ಕೆ ಕೂಡ ಅದೇ ರೀತಿ ಹೇಳಿದೆ. ಆದರೂ ಭಾರತದ ಆರ್ಥಿಕ ದರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ನಾನು ಹೇಳುತ್ತೇನೆ ಎಂದಿದ್ದಾರೆ ಸಚಿವೆ. 


ಕಳೆದ ವರ್ಷ ಭಾರತದ ಆರ್ಥಿಕಾಭಿವೃದ್ಧಿ ದರ ಶೇಕಡಾ 6.8ರಷ್ಟಾಗಿತ್ತು. ಐಎಂಎಫ್ ಇತ್ತೀಚೆಗೆ ಬಿಡುಗಡೆ ಮಾಡಿದ 'ಎಕನಾಮಿಕ್ ಔಟ್ ಲುಕ್' ಪುಸ್ತಕದಲ್ಲಿ ಈ ವರ್ಷ ಭಾರತದ ಆರ್ಥಿಕಾಭಿವೃದ್ಧಿ ಶೇಕಡಾ 6.1ರಷ್ಟಾಗಿದೆ ಎಂದು ಹೇಳಿದ್ದು ಮುಂದಿನ ವರ್ಷ ಶೇಕಡಾ 7ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಂದಾಜು ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com