ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಪೂರ್ಣ ವೇಗದಲ್ಲಿ ನಡೆಯುತ್ತಿದೆ: ನಿರ್ಮಲಾ ಸೀತಾರಾಮನ್ 

ಭಾರತ ಮತ್ತು ಅಮೆರಿಕಾ ಮಧ್ಯೆ ವ್ಯಾಪಾರ ಒಪ್ಪಂದ ಪ್ರಕ್ರಿಯೆ ಪೂರ್ಣ ವೇಗದಲ್ಲಿ ಸಾಗುತ್ತಿದ್ದು ಅದು ಸದ್ಯದಲ್ಲಿಯೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಾಷಿಂಗ್ಟನ್: ಭಾರತ ಮತ್ತು ಅಮೆರಿಕಾ ಮಧ್ಯೆ ವ್ಯಾಪಾರ ಒಪ್ಪಂದ ಪ್ರಕ್ರಿಯೆ ಪೂರ್ಣ ವೇಗದಲ್ಲಿ ಸಾಗುತ್ತಿದ್ದು ಅದು ಸದ್ಯದಲ್ಲಿಯೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


ವಾಷಿಂಗ್ಟನ್ ನಲ್ಲಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕೇಂದ್ರ ಕಚೇರಿಯಲ್ಲಿ ಭಾರತ ಮತ್ತು ಅಮೆರಿಕಾ ನಡುವಣ ವ್ಯಾಪಾರ ಒಪ್ಪಂದ ಕುರಿತು ನಿರ್ಮಲಾ ಸೀತಾರಾಮನ್ ಮತ್ತು ಅಮೆರಿಕಾ ಖಜಾನೆ ಕಾರ್ಯದರ್ಶಿ ಸ್ಟೀವನ್ ಮ್ಯೂಚಿನ್ ನಡುವೆ ಚರ್ಚೆಗೆ ಬಂದವು. ಮ್ಯೂಚಿನ್ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದ್ದಾರೆ.


ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಬಗ್ಗೆ ಕಾರ್ಯದರ್ಶಿ ಮುಂಚಿನ್ ಅವರಿಗೆ ವಿಸ್ತಾರವಾಗಿ ವಿವರಿಸಿದ್ದೇನೆ. ಈ ಕುರಿತು ವಾಣಿಜ್ಯ ಖಾತೆ ಸಚಿವರು ಮತ್ತು ಅಮೆರಿಕಾ ವ್ಯಾಪಾರ ಪ್ರತಿನಿಧಿ ಲೈಟ್‌ಹೈಜರ್ ಕಾರ್ಯನಿರತರಾಗಿದ್ದಾರೆ. ವ್ಯಾಪಾರ ಒಪ್ಪಂದ ಸಂಪೂರ್ಣ ವೇಗವಾಗಿ ಸಾಗುತ್ತಿದ್ದು ಇದರಲ್ಲಿ ಎರಡೂ ದೇಶಗಳು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದು ಒಪ್ಪಂದ ಸದ್ಯದಲ್ಲಿಯೇ ಏರ್ಪಡುವ ನಿರೀಕ್ಷೆಯಿದೆ ಎಂದು ಸೀತಾರಾಮನ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com