ದೊಡ್ಡ ಬೆಳವಣಿಗೆಯೊಂದು ಈಗಷ್ಟೇ ನಡೆದಿದೆ: ಇಸಿಸ್ ಮುಖ್ಯಸ್ಥ ಹತ್ಯೆ ಬೆನ್ನಲ್ಲೇ ಕುತೂಹಲ ಮೂಡಿಸಿದ ಟ್ರಂಪ್ ಹೇಳಿಕೆ

ಸಿರಿಯಾದಲ್ಲಿ ಅಮೆರಿಕಾ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದಿದ್ದು, ಇಸಿಸ್ ಮುಖ್ಯಸ್ಥ ಬಾಗ್ದಾದಿಯನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದಂತೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯೊಂದು ಎಲ್ಲರ ಕುತೂಹಲವನ್ನು ಕೆರಳಿಸಿದೆ. 
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಸಿರಿಯಾದಲ್ಲಿ ಅಮೆರಿಕಾ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದಿದ್ದು, ಇಸಿಸ್ ಮುಖ್ಯಸ್ಥ ಬಾಗ್ದಾದಿಯನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದಂತೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯೊಂದು ಎಲ್ಲರ ಕುತೂಹಲವನ್ನು ಕೆರಳಿಸಿದೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡೊನಾಲ್ಡ್ ಟ್ರಂಪ್ ಅವರು, ದೊಡ್ಡ ಬೆಳವಣಿಗೆಯೊಂದು ಈಗಷ್ಟೇ ನಡೆದಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. 

ಈ ನಡುವೆ ಇಸಿಸ್ ಮುಖ್ಯಸ್ಥ ಬಾಗ್ದಾದಿ ಹತ್ಯೆಯಾಗಿದ್ದಾನೆಂದು ಹೇಳಲಾಗುತ್ತಿದ್ದು, ಭಾನುವಾರ ಬೆಳಿಗ್ಗೆ 9 ಗಂಟೆಗೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ 6.30ಕ್ಕೆ ಈ ಕುರಿತು ಅಮೆರಿಕಾ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. 

ಬಾಗ್ದಾದಿ ಹತ್ಯೆ ಸಂಬಂಧ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದು, ಟ್ರಂಪ್ ನಡೆಸಲಿರುವ ಸುದ್ದಿಗೋಷ್ಠಿ ವಿದೇಶಾಂಗ ನೀತಿಗೆ ಸಂಬಂಧಿಸಿದ್ದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಹತ್ಯೆಯಾಗಿರುವ ಬಾಗ್ದಾದಿ ಇಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದು, 2014ರಿಂದ ಭೂಗತ ಆಗಿದ್ದ. ಕಳೆದ ಏಪ್ರಿಲ್ ತಿಂಗಳಿನಲ್ಲಿಯೂ ಇಸಿಸ್ ವಿಡಿಯೋವೊಂದನ್ನು ಹರಿಬಿಟ್ಟಿತ್ತು. ವಿಡಿಯೋದಲ್ಲಿ ಬಾಗ್ದಾದಿ ಕಾಣಿಸಿಕೊಂಡಿದ್ದ ಎಂದು ಹೇಳಲಾಗುತ್ತಿತ್ತು. 

2017ರ ಮೇ ತಿಂಗಳಿನಲ್ಲಿ ಅಮೆರಿಕಾ ನಡೆಸಿದ್ದ ವಾಯುದಾಳಿಯಲ್ಲಿ ಬಾಗ್ದಾದಿ ಗಂಭೀರವಾಗಿ ಗಾಯಗೊಂಡಿದ್ದ ಎಂದು ಅಮೆರಿಕಾ ಸೇನೆ ಹೇಳಿತ್ತು. ಈತ 2010ರಲ್ಲಿ ಇಸಿಸ್ ಮುಖ್ಯಸ್ಥನಾಗಿದ್ದ. ಪ್ರಸ್ತುತ ಅಮೆರಿಕಾ ನಡೆಸಿದ್ದ ದಾಳಿಯಲ್ಲಿ ಬಾಗ್ದಾದಿ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com