3 ದಿನಗಳ ರಷ್ಯಾ ಪ್ರವಾಸ; ಪ್ರಧಾನಿ ಮೋದಿಗೆ 'ಗಾರ್ಡ್ ಆಫ್ ಹಾನರ್' ಮೂಲಕ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಅವರ 3 ದಿನಗಳ ರಷ್ಯಾ ಪ್ರವಾಸ ಆರಂಭಗೊಂಡಿದ್ದು, ರಾಜಧಾನಿ ಮಾಸ್ತೋ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಸೇನೆ ಗಾರ್ಡ್ ಆಫ್ ಹಾನರ್ ಮೂಲಕ ಅದ್ಧೂರಿ ಸ್ವಾಗತ ನೀಡಿತು.
ವ್ಲಾಡಿವೋಸ್ಟಾಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ
ವ್ಲಾಡಿವೋಸ್ಟಾಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ

ರಷ್ಯಾ ಸೇನೆಯಿಂದ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಗೌರವ, ಉನ್ನತ ಮಟ್ಟದ ಅಧಿಕಾರಿಗಳ ಉಪಸ್ಥಿತಿ

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರ 3 ದಿನಗಳ ರಷ್ಯಾ ಪ್ರವಾಸ ಆರಂಭಗೊಂಡಿದ್ದು, ರಾಜಧಾನಿ ಮಾಸ್ತೋ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಸೇನೆ ಗಾರ್ಡ್ ಆಫ್ ಹಾನರ್ ಮೂಲಕ ಅದ್ಧೂರಿ ಸ್ವಾಗತ ನೀಡಿತು.

ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕೋದ ವ್ಲಾಡಿವೋಸ್ಟಾಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ನಿಲ್ದಾಣದಲ್ಲಿ ರಷ್ಯಾ ಸೇನೆಯ ಉನ್ನತಾಧಿಕಾರಿಗಳು, ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಮೋದಿ ವಿಮಾನದಿಂದ ಕೆಳಗೆಳಿಯುತ್ತಿದ್ದಂತೆಯೇ ರಷ್ಯಾ ಸೇನೆಯ ಸಿಬ್ಬಂದಿಗಳು ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಕೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದೊಂದಿಗೆ ಇದು ಮೂರನೇ ದ್ವಿಪಕ್ಷೀಯ ಭೇಟಿಯಾಗಿದೆ.

ಮೂರು ದಿನಗಳ ಕಾಲ ರಷ್ಯಾದಲ್ಲಿಯೇ ಉಳಿಯುವ ಪ್ರಧಾನಿ ನರೇಂದ್ರ ಮೋದಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಭೇಟಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಕ್ಷಣೆ, ವ್ಯಾಪಾರ ಸಂಬಂಧ, ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ. 

ಇದಲ್ಲದೆ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ 5ನೇ ಪೂರ್ವ ಆರ್ಥಿಕ ವೇದಿಕೆ ಮತ್ತು ಸಭೆಯಲ್ಲಿ ಪಾಲ್ಗೊಂಡು ಇತರೆ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಮುಖವಾಗಿ ಭಾರತದಲ್ಲಿ ಹೂಡಿಕೆ ಮಾಡುವ ಕುರಿತು ಪ್ರಧಾನಿ ಮೋದಿ ಮತ್ತು ಪುಟಿನ್ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com