ಚಂದ್ರನಲ್ಲಿಗೆ ರೋವರ್, ಕಡಿಮೆ ಸಾಧನೆ ಏನಲ್ಲ.. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಭೂತಪೂರ್ವ: ಅಮೆರಿಕ

ಚಂದ್ರನ ಮೇಲ್ಮೈ ಮೇಲೆ ರೋವರ್ ಇಳಿಸುವ ಭಾರತದ ಕಾರ್ಯಕ್ಕೆ ವಿಶ್ವಾದ್ಯಂತ ಶ್ಲಾಘನೆ ವ್ಯಕ್ತವಾಗುತ್ತಿದ್ದು, ರಷ್ಯಾ ಆಸ್ಟ್ರೇಲಿಯಾ ಬೆನ್ನಲ್ಲೇ ಅಮೆರಿಕ ಕೂಡ ಭಾರತೀಯ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಚಂದ್ರನ ಮೇಲ್ಮೈ ಮೇಲೆ ರೋವರ್ ಇಳಿಸುವ ಭಾರತದ ಕಾರ್ಯಕ್ಕೆ ವಿಶ್ವಾದ್ಯಂತ ಶ್ಲಾಘನೆ ವ್ಯಕ್ತವಾಗುತ್ತಿದ್ದು, ರಷ್ಯಾ ಆಸ್ಟ್ರೇಲಿಯಾ ಬೆನ್ನಲ್ಲೇ ಅಮೆರಿಕ ಕೂಡ ಭಾರತೀಯ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅಮೆರಿಕದ ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ಸಚಿವಾಲಯ, ಇಸ್ರೋ ಚಂದ್ರಯಾನ-2 ಯೋಜನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದೆ. 'ಚಂದ್ರನಲ್ಲಿಗೆ ರೋವರ್, ಕಡಿಮೆ ಸಾಧನೆ ಏನಲ್ಲ.. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧನೆ ಅಪೂತಪೂರ್ವ' ಎಂದು ಹೇಳಿದೆ.

'ಇಸ್ರೋ ವಿಜ್ಞಾನಿಗಳ ಅದ್ಭುತ ಕಾರ್ಯವನ್ನು ನಾವು ಶ್ಲಾಘಿಸುತ್ತೇವೆ. ಚಂದ್ರಯಾನ 2 ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದೆ. ಇದು ಭಾರತದ ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ ಪರಿಣಾಮಕಾರಿ ನೆರವಾಗಲಿದೆ. ಅಲ್ಲದೆ ಭಾರತ ತನ್ನ ಭವಿಷ್ಯದ ಯಾವುದೇ ಗುರಿಗಳನ್ನು ನಿಸ್ಸಂಶಯವಾಗಿ ಸಾಧಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ. ಧನ್ಯವಾದಗಳು ಭಾರತ ಎಂದು ಅಮೆರಿಕ ಟ್ವೀಟ್ ಮಾಡಿದೆ.

ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ನೈ ಮೇಲೆ ಇಳಿಯಲು ಕೇವಲ 2.1 ಕಿಮೀ ದೂರವಿದ್ದಾಗ ಅದರ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಭಾರತದ ಈ ಮಹತ್ವಾಕಾಂಕ್ಷಿ ಯೋಜವೆ ಸಂಪೂರ್ಣ ಯಶಸ್ವಿಯಾಗಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com