ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದಿಂದ ಸುಳ್ಳಿನ ಆರೋಪ-ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ  ಕಪೋಲ ಕಲ್ಪಿತ  ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ. 
ವಿಜಯ್ ಠಾಕೂರ್ ಸಿಂಗ್
ವಿಜಯ್ ಠಾಕೂರ್ ಸಿಂಗ್

ಜಿನಿವಾ: ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ  ಕಪೋಲ ಕಲ್ಪಿತ  ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ. 

 ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ 42ನೇ ಅಧಿವೇಶವನ್ನುದ್ದೇಶಿಸಿ ಮಾತನಾಡಿದ  ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್, ಕಣಿವೆ ರಾಜ್ಯ  ಜಮ್ಮು- ಕಾಶ್ಮೀರದಲ್ಲಿನ ತಾರತಮ್ಯ ತೊಡೆದುಹಾಕಲು ಸಂವಿಧಾನದ ಕಲಂ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಸತ್ತಿನ ನಿರ್ಧಾರವಾಗಿದೆ ಎಂದರು.

ಕಲಂ 370ನೇ ವಿಧಿ ರದ್ದತಿ  ಭಾರತೀಯ ಸಂವಿಧಾನದ ಚೌಕಟ್ಟಿನೊಳಗೆ  ಕೈಗೊಂಡ ನಿರ್ಧಾರವಾಗಿದೆ ಎಂದು ವಿಜಯ್ ಠಾಕೂರ್ ತಿಳಿಸಿದರು. 

ಇದಕ್ಕೂ ಮುನ್ನ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಶಿ, ಮೂಲ   ಸೌಲಭ್ಯಗಳನ್ನೂ ಜನತೆಗೆ ನಿರಾಕರಿಸಲಾಗುತ್ತಿದ್ದು, ಜಮ್ಮು-ಕಾಶ್ಮೀರವನ್ನು ಅತಿ ದೊಡ್ಡ ಜೈಲನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com