ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ಜಂಟಿ ಹೇಳಿಕೆಯನ್ನು ತಿರಸ್ಕರಿಸಿದ ಭಾರತ! 

ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ನೀಡಿರುವ ಜಂಟಿ ಹೇಳಿಕೆಯನ್ನು ತಿರಸ್ಕರಿಸುವುದಾಗಿ ಭಾರತ ಹೇಳಿದೆ. 
ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ಜಂಟಿ ಹೇಳಿಕೆಯನ್ನು ತಿರಸ್ಕರಿಸಿದ ಭಾರತ!
ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ಜಂಟಿ ಹೇಳಿಕೆಯನ್ನು ತಿರಸ್ಕರಿಸಿದ ಭಾರತ!

ನವದೆಹಲಿ: ಕಾಶ್ಮೀರದ ಕುರಿತು ಪಾಕಿಸ್ತಾನ-ಚೀನಾ ನೀಡಿರುವ ಜಂಟಿ ಹೇಳಿಕೆಯನ್ನು ತಿರಸ್ಕರಿಸುವುದಾಗಿ ಭಾರತ ಹೇಳಿದೆ. 

ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಪಾಕಿಸ್ತಾನ ಭೇಟಿಯ ವೇಳೆ ಕಾಶ್ಮೀರದ ವಿಷಯವಾಗಿ ಪಾಕಿಸ್ತಾನಕ್ಕೆ ಬೆಂಬಲವನ್ನು ಘೋಷಿಸಿದ್ದರು. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಭಾರತ ವಿದೇಶಾಂಗ ಕಾರ್ಯದರ್ಶಿ ರವೀಶ್ ಕುಮಾರ್, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯನ್ನು ಭಾರತ ತಿರಸ್ಕರಿಸುತ್ತದೆ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ  ಎಂದು ಹೇಳಿದ್ದಾರೆ. 

ಇದೇ ವೇಳೆ ಭಾರತಕ್ಕೆ ಸೇರಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಚೀನಾ-ಪಾಕ್ ಎಕಾನಾಮಿಕ್ ಕಾರಿಡಾರ್ ಯೋಜನೆ ಚಟುವಟಿಕೆಗಳು ನಡೆಯುತ್ತಿರುವುದಕ್ಕೂ ಭಾರತ ಆತಂಕ ವ್ಯಕ್ತಪಡಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೇರೆ ರಾಷ್ಟ್ರಗಳ ಹಸ್ತಕ್ಷೇಪದಿಂದ ಸ್ಥಿತಿಗತಿಗಳ ಬದಲಾವಣೆಯನ್ನು ಭಾರತ ವಿರೋಧಿಸುತ್ತದೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ.

ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ವಿಷಯವನ್ನು ಉಲ್ಲೇಖಿಸಿದ್ದ ಚೀನಾ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿತ್ತು. ಅಷ್ಟೇ ಅಲ್ಲದೇ ಪ್ರಾದೇಶಿಕ ಪರಿಸ್ಥಿತಿಯನ್ನು ಜಟಿಲಗೊಳಿಸುವ ಯಾವುದೇ ಏಕಪಕ್ಷೀಯ ಕ್ರಮಗಳ ವಿರುದ್ಧವಾಗಿರುವುದಾಗಿ ಚೀನಾ ತಿಳಿಸಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com