ಕಾಶ್ಮೀರ ವಿವಾದ: ಭಾರತ-ಪಾಕ್ ಮಾತುಕತೆ ಅಸಾಧ್ಯ, 3ನೇ ವ್ಯಕ್ತಿಯ ಮಧ್ಯಸ್ಥಿಕೆಯೊಂದೇ ದಾರಿ - ಖುರೇಶಿ

ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಮಾತುಕತೆ ಅಸಾಧ್ಯ ಎಂದಿರುವ ಪಾಕ್ ವಿದೇಶಾಂಗ ಸಚಿವ ಶಾಹ್ ಮೆಹ್ಮೂದ್ ಖುರೇಶಿ ಅವರು, ವಿವಾದ ಇತ್ಯರ್ಥಕ್ಕೆ....
ಶಾ ಮೆಹ್ಮೂದ್ ಖುರೇಷಿ
ಶಾ ಮೆಹ್ಮೂದ್ ಖುರೇಷಿ

ಇಸ್ಲಾಮಾಬಾದ್: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಮಾತುಕತೆ ಅಸಾಧ್ಯ ಎಂದಿರುವ ಪಾಕ್ ವಿದೇಶಾಂಗ ಸಚಿವ ಶಾಹ್ ಮೆಹ್ಮೂದ್ ಖುರೇಶಿ ಅವರು, ವಿವಾದ ಇತ್ಯರ್ಥಕ್ಕೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯೊಂದೇ ದಾರಿ ಎಂದು ಬುಧವಾರ ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಲ್ಭಣ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಎರಡೂ ರಾಷ್ಟ್ರಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ನಾವು ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಖುರೇಶಿ ಈ ಹೇಳಿಕೆ ನೀಡಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಉಭಯ ದೇಶಗಳ ನಡುವೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯೊಂದೇ ದಾರಿ ಎಂದು ಪಾಕ್ ವಿದೇಶಾಂಗ ಸಚಿವರು ಹೇಳಿದ್ದಾರೆ.

ಕಳೆದ ಸೋಮವಾರ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ಮಲೀಹಾ ಲೊಧಿ ಅವರು ಗುಟೆರೆಸ್ ಅವರನ್ನು ಭೇಟಿ ಮಾಡಿ, ಕಾಶ್ಮೀರ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಮನವಿ ಮಾಡಿತ್ತು. ಆದರೆ ಗುಟೆರಸ್ ಅವರು ಪಾಕ್ ಮನವಿಯನ್ನು ತಿರಸ್ಕರಿಸಿದ್ದಾರೆ.

ಇನ್ನು ಜಿನೆವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ(ಯುಎನ್‌ಎಚ್‌ಆರ್‌ಸಿ) 42ನೇ ಸಭೆಯಲ್ಲಿ ಜಮ್ಮು–ಕಾಶ್ಮೀರದ ವಿಶೇಷಾಧಿಕಾರ ರದ್ದತಿ ವಿಚಾರವನ್ನು ಸಮರ್ಥಿಸಿಕೊಂಡ ಭಾರತ, ಇದು ಆಂತರಿಕ ವಿಚಾರ ಮತ್ತು ಸಾರ್ವಭೌಮ ನಿರ್ಧಾರ ಹೇಳಿತ್ತು. ಅಲ್ಲದೆ ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಅಂತರ ರಾಷ್ಟ್ರೀಯ ತನಿಖೆ ನಡೆಸಬೇಕು ಎಂಬ ಪಾಕಿಸ್ತಾನದ ಬೇಡಿಕೆಯನ್ನು ತಿರಸ್ಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com