ಭಾರತ-ಪಾಕ್ ಮಧ್ಯೆ ಹಿಂದಿಗಿಂತ ಈಗ ಆತಂಕ ಕಡಿಮೆಯಾಗಿದೆ: ಡೊನಾಲ್ಡ್ ಟ್ರಂಪ್ 

ದಕ್ಷಿಣ ಏಷ್ಯಾ ರಾಷ್ಟ್ರಗಳಾದ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನ ಆತಂಕ ಪರಿಸ್ಥಿತಿ ಕಡಿಮೆಯಾಗಿದ್ದರೂ ತಾವು ಭಾರತ ಮತ್ತು ಪಾಕಿಸ್ತಾನ ಪ್ರಧಾನ ಮಂತ್ರಿಗಳನ್ನು ಸದ್ಯದಲ್ಲಿಯೇ ಭೇಟಿ ಮಾಡುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಭಾರತ-ಪಾಕಿಸ್ತಾನ ಎರಡೂ ದೇಶಗಳ ಪ್ರಧಾನಿಗಳನ್ನು ಭೇಟಿ ಮಾಡಿ ಮಾತುಕತೆಯಾಡುತ್ತೇನೆ ಎಂದ ಟ್ರಂಪ್ 

ವಾಷಿಂಗ್ಟನ್: ದಕ್ಷಿಣ ಏಷ್ಯಾ ರಾಷ್ಟ್ರಗಳಾದ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನ ಆತಂಕ ಪರಿಸ್ಥಿತಿ ಕಡಿಮೆಯಾಗಿದ್ದರೂ ತಾವು ಭಾರತ ಮತ್ತು ಪಾಕಿಸ್ತಾನ ಪ್ರಧಾನ ಮಂತ್ರಿಗಳನ್ನು ಸದ್ಯದಲ್ಲಿಯೇ ಭೇಟಿ ಮಾಡುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.


ಇದೇ ತಿಂಗಳು 22ರಂದು ಹೌಡಿ ಮೋದಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿದ್ದಾರೆ. ಪಾಕಿಸ್ತಾನ ಪ್ರಧಾನಿಯನ್ನು ಎಲ್ಲಿ ಮತ್ತು ಯಾವಾಗ ಭೇಟಿ ಮಾಡಲಿದ್ದಾರೆ ಎಂದು ಹೇಳಲಿಲ್ಲ.


ಈ ತಿಂಗಳ ಅಂತ್ಯದಲ್ಲಿ ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯ ಹೊರಗೆ ಪಾಕ್ ಪ್ರಧಾನಿಯನ್ನು ಡೊನಾಲ್ಡ್ ಟ್ರಂಪ್ ಭೇಟಿಯಾಗುವ ಸಾಧ್ಯತೆಯಿದೆ.


 ಹೌಡಿ ಮೋದಿ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ನಂತರ ಡೊನಾಲ್ಡ್ ಟ್ರಂಪ್ ಒಹಿಯೊಗೆ ತೆರಳಿ ಅಲ್ಲಿಂದ ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಏನಿದು ಹೌಡಿ-ಮೋದಿ ಕಾರ್ಯಕ್ರಮ?: ಇದೇ ಮೊದಲ ಬಾರಿಗೆ ಅಮೆರಿಕಾ ಅಧ್ಯಕ್ಷರೊಬ್ಬರು ಅಮೆರಿಕಾದ ಒಂದು ಸ್ಥಳದಲ್ಲಿ ಸಾವಿರಾರು ಭಾರತೀಯ ಮೂಲದ ಅಮೆರಿಕನ್ನರು ಸೇರುವ ಸ್ಥಳದಲ್ಲಿ ಉದ್ದೇಶಿಸಿ ಮಾತನಾಡುತ್ತಿರುವುದು. ಅಮೆರಿಕಾದಲ್ಲಿ ಮುಂದಿನ ವರ್ಷ ಅಧ್ಯಕ್ಷೀಯ ಚುನಾವಣೆಯಿದೆ. ಅದರಲ್ಲಿ ಭಾರತೀಯ ಮೂಲದ ಅಮೆರಿಕನ್ನರು ಬಹುಮುಖ್ಯ ಪಾತ್ರ ವಹಿಸಲಿದ್ದಾರೆ. 


ರಿಪಬ್ಲಿಕನ್ ಪಕ್ಷದಿಂದ ಈಗಾಗಲೇ ತಮ್ಮ ಸ್ಪರ್ಧೆಯನ್ನು ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹೌಡಿ ಕಾರ್ಯಕ್ರಮ ಐತಿಹಾಸಿಕ ಮತ್ತು ಅಭೂತಪೂರ್ವವಾದದ್ದು ಎಂದು ಅಮೆರಿಕಾದ ಭಾರತೀಯ ರಾಯಭಾರಿ ಹರ್ಷವರ್ಧನ ಶೃಂಗ್ಲಾ ಹೇಳಿದ್ದಾರೆ. ಭಾರತ ಮತ್ತು ಅಮೆರಿಕಾ ಮಧ್ಯೆ ಬೆಳೆದಿರುವ ಗಟ್ಟಿಯಾದ ಸ್ನೇಹತ್ವ ಮತ್ತು ಸಹಕಾರ ಸಂಬಂಧವನ್ನು ಇದು ಪ್ರತಿಫಲಿಸುತ್ತದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com