ಅಫ್ಘಾನ್ ಅಧ್ಯಕ್ಷರ ರ್ಯಾಲಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 24 ಸಾವು, ಅಶ್ರಫ್ ಘನಿ ಅಪಾಯದಿಂದ ಪಾರು

ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್‌ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ....
ಅಶ್ರಫ್‌ ಘನಿ
ಅಶ್ರಫ್‌ ಘನಿ

ಕಾಬೂಲ್‌: ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್‌ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಅಫ್ಘಾನ್ ಅಧ್ಯಕ್ಷರು ಅಪಾಯದಿಂದ ಪಾರಾಗಿದ್ದಾರೆ.

ಉತ್ತರ ಅಫ್ಘಾನಿಸ್ತಾನದ ಪರ್ವಾನ್‌ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಉಗ್ರರು ಚುನಾವಣಾ ಪ್ರಚಾರ ಸಭೆಯಲ್ಲಿ ಬೈಕ್ ನುಗ್ಗಿಸಿ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಅಧ್ಯಕ್ಷ ಘನಿ ಸ್ಥಳದಲ್ಲಿದ್ದರು. ಆದರೆ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

ಯಾವ ಉಗ್ರ ಸಂಘಟನೆಯೂ ಇದುವರೆಗೆ ಈ ಬಾಂಬ್‌ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿಲ್ಲ.

ಈ ಬಾಂಬ್‌ ಸ್ಫೋಟದ ಬೆನ್ನಿಗೆ ರಾಜಧಾನಿ ಕಾಬೂಲ್‌ ನಗರದಲ್ಲಿ ಅವಳಿ ಬಾಂಬ್‌ ಸ್ಫೋಟ ಸಂಭವಿಸಿದೆ. ಮಸೌದ್‌ ಸ್ಕ್ವಾರ್‌ ಸಮೀಪ ಒಂದು ಬಾಂಬ್‌ ಸ್ಫೋಟಿಸಿದ್ದರೆ, ಇನ್ನೊಂದು ಬಾಂಬ್‌ ಅಮೆರಿಕ ರಾಯಭಾರ ಕಚೇರಿ ಇರುವ ಮ್ಯಾಕ್ರೋರ್ಯಾನ್‌ 2 ಪ್ರದೇಶದಲ್ಲಿ ಸಂಭವಿಸಿದೆ.

ಅಫ್ಘಾನಿಸ್ತಾನದಲ್ಲಿ ಈ ತಿಂಗಳ ಅಂತ್ಯಕ್ಕೆ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ದೇಶದ ಅಲ್ಲಲ್ಲಿ ಬಾಂಬ್‌ ಸ್ಫೋಟಗಳು ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com