ಅಮೆರಿಕಾದ ಶ್ವೇತ ಭವನದ ಬಳಿ ಗುಂಡಿನ ದಾಳಿ: 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 6  ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಾಸ್ಕೊ: ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 6  ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ.

ಘಟನೆಯ ಬಗ್ಗೆ ಪೊಲೀಸರಿಗೆ ಮಧ್ಯರಾತ್ರಿ 2.06ರ ಸುಮಾರಿಗೆ ಮಾಹಿತಿ ಬಂದಿದೆ ಎಂದು ಫಾಕ್ಸ್ ನ್ಯೂಸ್ ಪ್ರಸಾರ ಸಂಸ್ಥೆ ವರದಿ ಮಾಡಿದೆ.

ವಾಷಿಂಗ್ಟನ್ ಡಿಸಿಯ ಕೊಲಂಬಿಯಾ ರಸ್ತೆ ಬಳಿ ಮುಸುಧಾರಿಗಳಾಗಿ ಬಂದಿರುವ ವ್ಯಕ್ತಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 6 ಮಂದಿ ಗಾಯಗೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಮತ್ತು ಪೊಲೀಸ್‌ ಕಾರುಗಳು ಸ್ಥಳಕ್ಕೆ ಆಗಮಿಸಿವೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ೇಎಂದು ಎನ್‌ಬಿಸಿ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com