ಸೆ. 23ರಂದು ಟ್ರಂಪ್ - ಇಮ್ರಾನ್ ಖಾನ್ ಭೇಟಿ; ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಸಾಧ್ಯತೆ

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದು, ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ ಎಂದು ಡಾನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದು, ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ ಎಂದು ಡಾನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಮ್ರಾನ್ ಖಾನ್ ಅಮೆರಿಕಕ್ಕೆ ತೆರಳಲಿದ್ದಾರೆ. ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಅವರ ಎರಡನೇ ಅಮೆರಿಕ ಪ್ರವಾಸವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 22ರಂದು ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ. ಅದರ ಮರುದಿನ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಹೂಸ್ಟನ್‌ನಲ್ಲಿ ಹಮ್ಮಿಕೊಂಡಿರುವ "ಹೌಡಿ ಮೋದಿ" ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com