ಪ್ರಧಾನಿ ಮೋದಿ ಭೇಟಿ ಮಾಡಿದ ಕಾಶ್ಮೀರಿ ಪಂಡಿತರ ನಿಯೋಗ; ವಿಧಿ 370ರದ್ಧತಿಗೆ ಬೆಂಬಲ

ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ಮೋದಿ ಹ್ಯೂಸ್ಟನ್ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಈ ವೇಳೆ ಅಮೆರಿಕದಲ್ಲಿರುವ ಕಾಶ್ಮೀರಿ ಪಂಡಿತರ ನಿಯೋಗವೊಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ.
ಕಾಶ್ಮೀರಿ ಪಂಡಿತರ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ
ಕಾಶ್ಮೀರಿ ಪಂಡಿತರ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ

ಹೂಸ್ಟನ್: ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ಮೋದಿ ಹ್ಯೂಸ್ಟನ್ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಈ ವೇಳೆ ಅಮೆರಿಕದಲ್ಲಿರುವ ಕಾಶ್ಮೀರಿ ಪಂಡಿತರ ನಿಯೋಗವೊಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಬಂದಿಳಿದ ಕೆಲವೇ ಕ್ಷಣಗಳಲ್ಲಿ ಕಾಶ್ಮೀರಿ ಪಂಡಿತ ಸಮುದಾಯದ ನಿಯೋಗವೊಂದು ಅವರನ್ನು ಭೇಟಿಯಾಯಿತು. ಇದೇ ವೇಳೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರಕ್ಕೆ ಕಾಶ್ಮೀರಿ ಪಂಡಿತರು ಬೆಂಬಲ ಘೋಷಿಸಿದರು.

ಭಾರತದ ಪ್ರಗತಿಗೆ ಮತ್ತು ಪ್ರತಿಯೊಬ್ಬ ಭಾರತೀಯರ ಸಬಲೀಕರಣಕ್ಕಾಗಿ ಅವರು ಕೈಗೊಳ್ಳುತ್ತಿರುವ ಕ್ರಮಗಳನ್ನು ಅವರು ಬೆಂಬಲಿಸಿದ್ದಾರೆ. ಅಂತೆಯೇ ಮೋದಿ ಸರ್ಕಾರದ ಕ್ರಮಕ್ಕೆ 7 ಲಕ್ಷ ಕಾಶ್ಮೀರಿ ಪಂಡಿತ ಸಮುದಾಯದ ವತಿಯಿಂದ ಧನ್ಯವಾದ ಅರ್ಪಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವೀಟ್‌ ನಲ್ಲಿ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com