ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ: ಹ್ಯೂಸ್ಟನ್ ನಲ್ಲಿ ಪ್ರಧಾನಿ ಮೋದಿ

ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ.

Published: 22nd September 2019 12:07 PM  |   Last Updated: 22nd September 2019 12:07 PM   |  A+A-


PM Modi tells Kashmiri Pandits in Houston

ಕಾಶ್ಮೀರಿ ಪಂಡಿತರ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ

Posted By : Srinivasamurthy VN
Source : ANI

ಹ್ಯೂಸ್ಟನ್‌: ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ.

ಒಂದು ವಾರಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಅಮೆರಿಕದ ಹೂಸ್ಟನ್‌ನಲ್ಲಿ ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿಯಾಗಿ ಸಂವಾದ ನಡೆಸಿದರು. ಈ ವೇಳೆ ಕಾಶ್ಮೀರಿ ಪಂಡಿತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನೀವು ಸಾಕಷ್ಟು ನೋವು ಅನುಭವಿಸಿದ್ದೀರಿ. ಇನ್ನು ಮುಂದೆ ನಾವು ಎಲ್ಲರೂ ಸೇರಿ ನವ ಕಾಶ್ಮೀರವನ್ನು ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದೆ ಎಂದು ಹೇಳಿದ್ದಾರೆ.

ಇನ್ನು ಸಂವಾದದಲ್ಲಿ ಕಾಶ್ಮೀರಿ ಪಂಡಿತರೊಬ್ಬರು ಪ್ರಧಾನಿ ಮೋದಿಯವರ ಕೈಗೆ ಮುತ್ತನ್ನಿಟ್ಟು 7 ಲಕ್ಷ ಕಾಶ್ಮೀರಿ ಪಂಡಿತರ ಪರವಾಗಿ ಧನ್ಯವಾದ ಅರ್ಪಿಸಿದರು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಲು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕಾಗಿ ಕಾಶ್ಮೀರಿ ಪಂಡಿತರ ನಿಯೋಗ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದರು. ಬಳಿಕ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಕಾಶ್ಮೀರಿ ಪಂಡಿತ್ ಪಿಎಂ ಸುರಿಂದರ್ ಕೌಲ್, ಕಳೆದ 70 ವರ್ಷಗಳಲ್ಲಿ ಕಾಶ್ಮೀರಿ ಪಂಡಿತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಇದೀಗ ನೂತನ ಕಾಶ್ಮೀರ ನಿರ್ಮಿಸುವಲ್ಲಿ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾಗಿ ಹೇಳಿದರು.

ಪಿಎಂ ಮೋದಿ ಅವರು ಬೋಹ್ರಾ ಮುಸ್ಲಿಮರ ನಿಯೋಗ ಮತ್ತು ಸಿಖ್ ಸಮುದಾಯದ ಸದಸ್ಯರ ನಿಯೋಗವನ್ನೂ ಸಹ ಹೂಸ್ಟನ್‌ನಲ್ಲಿ ಭೇಟಿಯಾದರು. ಸಿಖ್ ಸಮುದಾಯವು ಪ್ರಧಾನಿ ಮೋದಿ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದು,  1984 ರ ಸಿಖ್ ನರಮೇಧದ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿತು. ದೆಹಲಿ ವಿಮಾನ ನಿಲ್ದಾಣದ ಹೆಸರನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುನಾನಕ್ ದೇವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಿಖ್ ಸಮುದಾಯ ಒತ್ತಾಯಿಸಿತು. 

Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
facebook twitter whatsapp