ಭಾರತದ ಒಪ್ಪಿಗೆ ಇಲ್ಲದೇ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಿಲ್ಲ: ಡೊನಾಲ್ಡ್ ಟ್ರಂಪ್

ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಜಾಗತಿಕ ಮಟ್ಟದಲ್ಲಿ ಮತ್ತೆ ಮುಖಭಂಗವಾಗಿದ್ದು, ತುಂಬಿದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಒಪ್ಪಿಗೆ ಇಲ್ಲದೇ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಇಮ್ರಾನ್ ಖಾನ್-ಟ್ರಂಪ್
ಇಮ್ರಾನ್ ಖಾನ್-ಟ್ರಂಪ್

ಅಂತಾರಾಷ್ಟ್ರೀಯ ಪತ್ರಕರ್ತರ ಮುಂದೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಮತ್ತೆ ಮುಖಭಂಗ

ನ್ಯೂಯಾರ್ಕ್: ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಜಾಗತಿಕ ಮಟ್ಟದಲ್ಲಿ ಮತ್ತೆ ಮುಖಭಂಗವಾಗಿದ್ದು, ತುಂಬಿದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಒಪ್ಪಿಗೆ ಇಲ್ಲದೇ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ತಾವು ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ಹೇಳಿಕೆಯನ್ನು ಮತ್ತೆ ಪುನರುಚ್ಛರಿಸಿದ್ದಾರೆ. ನ್ಯೂಯಾರ್ಕ್ ನಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ನಾನೂ ಕೂಡ ಕಾಶ್ಮೀರ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧನಿದ್ದೇನೆ. ಆ ಜವಾಬ್ದಾರಿಯನ್ನು ನಾನು ಸಮರ್ಥವಾಗಿ ನಿಭಾಯಿಸಬಲ್ಲ ಕೂಡ. ಆದರೆ ಇದಕ್ಕೆ ಭಾರತದ ಒಪ್ಪಿಗೆ ಇಲ್ಲದಿದ್ದರೆ ನಾನು ಮಾಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಈಗಾಗಲೇ ಕಾಶ್ಮೀರದ ವಿಷಯದಲ್ಲಿ ಭಾರತವು ಯಾವುದೇ ದೇಶದ ಮಧ್ಯಸ್ಥಿಕೆಯನ್ನು ಅಗತ್ಯವಿಲ್ಲ, ಇದು ನಮ್ಮ ದೇಶದ ಆಂತರಿಕ ವಿಚಾರ ಎಂದು ಹಲವು ಬಾರಿ ಹೇಳಿದೆ. ದ್ವಿಪಕ್ಷೀಯ ಮಾತುಕತೆಗೆ ಆದ್ಯತೆ ನೀಡಬೇಕು ಎಂದಿದೆ.

ಹೀಗಿದ್ದರೂ ಪಾಕಿಸ್ತಾನ ಮಾತ್ರ ಟ್ರಂಪ್ ಮಧ್ಯಸ್ಥಿಕೆಗೆ ಪಟ್ಟು ಹಿಡಿದಿದ್ದು, ಇದೀಗ ಸ್ವತಃ ಟ್ರಂಪ್ ಈ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com