ಭಾರತದಲ್ಲಿ 100 ಬಿಲಿಯನ್ ಡಾಲರ್ ಹೂಡಿಕೆಗೆ ಸೌದಿ ಅರೇಬಿಯಾ ಮುಂದು

ವಿಶ್ವದ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರ ಸೌದಿ ಅರೇಬಿಯಾ ಭಾರತದಲ್ಲಿ ಬರೊಬ್ಬರಿ 100 ಬಿಲಿಯನ್ ಡಾಲರ್ ಹೂಡಿಕೆಗೆ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿಶ್ವದ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರ ಸೌದಿ ಅರೇಬಿಯಾ ಭಾರತದಲ್ಲಿ ಬರೊಬ್ಬರಿ 100 ಬಿಲಿಯನ್ ಡಾಲರ್ ಹೂಡಿಕೆಗೆ ನಿರ್ಧರಿಸಿದೆ.

ಹೌದು.. ಸೌದಿ ಅರೇಬಿಯಾ ಭಾರತದಲ್ಲಿ ಹೂಡಿಕೆಗೆ ಮುಂದಾಗಿದ್ದು, ತನ್ನ ದೇಶದ ಆರ್ಥಿಕ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ ಭಾರತದಲ್ಲಿ ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.

ಸೌದಿ ಅರೇಬಿಯಾ ಈಗಾಗಲೇ ಭಾರತದಲ್ಲಿ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದ್ದು, ಭಾರತದೊಂದಿಗೆ ತೈಲ, ಅನಿಲ ಮತ್ತು ಗಣಿಗಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ದೀರ್ಘಕಾಲೀನ ಸಹಭಾಗಿತ್ವವನ್ನು ಹೊಂದಿದೆ. ಈ ಸಹಭಾಗಿತ್ವವನ್ನು ಮುಂದುವರೆಸುವ ನಿಟ್ಟಿನಲ್ಲಿ ಭಾರತದಲ್ಲಿ ಹೂಡಿಕೆ ಮಾಡುತ್ತಿರುವುದಾಗಿ ಸೌದಿ ಸರ್ಕಾರ ಹೇಳಿದೆ.

ಈ ಕುರಿತಂತೆ ಸುದ್ದಿಸಂಸ್ಛೆಗೆ ನೀಡಿರುವ ಸಂದರ್ಶನದಲ್ಲಿ ಮಾಹಿತಿ ನೀಡಿರುವ ಸೌದಿ ರಾಯಭಾರಿ ಡಾ. ಸೌದ್ ಬಿನ್ ಮೊಹಮ್ಮದ್ ಅಲ್ ಸತಿ ಅವರು, 'ಇಂಧನ, ಸಂಸ್ಕರಣೆ, ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ, ಕೃಷಿ, ಖನಿಜಗಳು ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100 ಬಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಮಾಡಲು ಸೌದಿ ಅರೇಬಿಯಾ ನೋಡುತ್ತಿದೆ.  ಸೌದಿ ಅರೇಬಿಯಾದ ಅತಿದೊಡ್ಡ ತೈಲ ದೈತ್ಯ ಅರಾಮ್ಕೊ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜೊತೆಗಿನ ಉದ್ದೇಶಿತ ಸಹಭಾಗಿತ್ವವು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಇಂಧನ ಸಂಬಂಧಗಳ ಕಾರ್ಯತಂತ್ರದ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. 

ಅಂತೆಯೇ ತೈಲ ಪೂರೈಕೆ, ಮಾರ್ಕೆಟಿಂಗ್, ಪೆಟ್ರೋಕೆಮಿಕಲ್ಸ್ ಮತ್ತು ಲೂಬ್ರಿಕಂಟ್‌ಗಳಿಗೆ ಸಂಸ್ಕರಣೆ ಮಾಡುವುದರಿಂದ ಭಾರತದ ಮೌಲ್ಯ ಸರಪಳಿಯಲ್ಲಿ ಹೂಡಿಕೆ ಮಾಡುವುದು ಅರಾಮ್ಕೊದ ಜಾಗತಿಕ ಡೌನ್‌ಸ್ಟ್ರೀಮ್ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ. ಈ ಹಿನ್ನೆಲೆಯಲ್ಲಿ, ಸೌದಿ ಅರಾಮ್ಕೊ ಭಾರತದ ಇಂಧನ ಕ್ಷೇತ್ರದಲ್ಲಿ 44 ಬಿಲಿಯನ್ ಯುಎಸ್ ಡಾಲರ್ ವೆಸ್ಟ್ ಕೋಸ್ಟ್ ರಿಫೈನರಿ ಮತ್ತು ಮಹಾರಾಷ್ಟ್ರದ ಪೆಟ್ರೋಕೆಮಿಕಲ್ ಪ್ರಾಜೆಕ್ಟ್ ಮತ್ತು ರಿಲಯನ್ಸ್ ಜೊತೆಗಿನ ದೀರ್ಘಾವಧಿಯ ಸಹಭಾಗಿತ್ವವು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಕಾರ್ಯತಂತ್ರದ ಮೈಲಿಗಲ್ಲುಗಳನ್ನು ಪ್ರತಿನಿಧಿಸುತ್ತದೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com