ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್-19: ಅಮೆರಿಕದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ, ಜನರು ಅಂತರ ಕಾಪಾಡುತ್ತಿಲ್ಲ- ಶ್ವೇತಭವನ ಆತಂಕ

ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರುತ್ತಿರುವುದು, ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತದೆ ಎಂದು ಶ್ವೇತಭವನದ ಕೋವಿಡ್-19 ಸಮಸ್ಯೆಯ ನಿರ್ವಾಹಕ ದೆಬೋರಾ ಬಿರ್ಕ್ಸ್ ತಿಳಿಸಿದ್ದಾರೆ.
Published on

ವಾಷಿಂಗ್ಟನ್: ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರುತ್ತಿರುವುದು, ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತದೆ ಎಂದು ಶ್ವೇತಭವನದ ಕೋವಿಡ್-19 ಸಮಸ್ಯೆಯ ನಿರ್ವಾಹಕ ದೆಬೋರಾ ಬಿರ್ಕ್ಸ್ ತಿಳಿಸಿದ್ದಾರೆ.

ದೇಶದಲ್ಲಿ 2.42 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲೇ 1,169 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಈಗ 6000 ರ ಗಡಿ ದಾಟಿದೆ, ಕರೋನವೈರಸ್ ಕಾರಣದಿಂದಾಗಿ ಒಟ್ಟು 6,057 ಸಾವುಗಳು ದಾಖಲಾಗಿವೆ.

ಈ ಅಂಕಿಅಂಶಗಳನ್ನು ಗಮನಿಸಿದರೆ ನಾವು ಸ್ಪಷ್ಟವಾಗಿ ಹೇಳಬಹುದು. ಎಲ್ಲಾ ಅಮೆರಿಕನ್ನರು ಸಾಮಾಜಿಕ ಅಂತರವನ್ನು ಕಾಪಾಡುತ್ತಿಲ್ಲ. ಈ ವ್ಯವಸ್ಥೆಯನ್ನು ತಕ್ಷಣ ಬದಲಿಸಬೇಕಿದೆ ಎಮದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. 

ಹದಿನಾರು ದಿನಗಳ ಹಿಂದೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಅನೇಕ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದರು. ಆದರೂ, ಜನರು ಸೋಂಕಿಗೆ ಗುರಿಯಾಗುತ್ತಿದ್ದಾರೆ ಎಂದಿದ್ದಾರೆ. 

ಮಾರ್ಗಸೂಚಿ ಬಿಡುಗಡೆಗೊಂಡ ನಂತರ ದೇಶದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದಿದ್ದಾರೆ. 

ಕಳೆದ ಕೆಲ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ರಾಜ್ಯಗಳಿಗೆ ಸೋಂಕಿತ ವ್ಯಕ್ತಿಗಳು ಯಾವುದೇ ಪರೀಕ್ಷೆಗೊಳಪಡದೆ ಪ್ರವೇಶಿಸಿದ್ದಾರೆ. ಇದರಿಂದ ಈ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದರೆ ಈ ಸಂಖ್ಯೆಯನ್ನು ನಿಯಂತ್ರಿಸಬಹುದು ಎಂದು ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com