ಕೋವಿಡ್- 19: ಚಿಕಿತ್ಸೆ ಕಂಡುಹಿಡಿಯುವಲ್ಲಿ ಗಣನೀಯ ಪ್ರಗತಿ- ಡೊನಾಲ್ಡ್ ಟ್ರಂಪ್ 

ಕೋವಿಡ್-19 ಸೋಂಕಿನ ವಿರುದ್ಧ ಚಿಕಿತ್ಸೆಗಳನ್ನು ಕಂಡುಹಿಡಿಯುವಲ್ಲಿ ಅಮೆರಿಕ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್
Updated on: 

ವಾಷಿಂಗ್ಟನ್ : ಕೋವಿಡ್-19 ಸೋಂಕಿನ ವಿರುದ್ಧ ಚಿಕಿತ್ಸೆಗಳನ್ನು ಕಂಡುಹಿಡಿಯುವಲ್ಲಿ ಅಮೆರಿಕ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧ ಕ್ಷೇತ್ರದಲ್ಲಿ ನಾವು ಸಾಕಷ್ಟುಸಾಧನೆ ಮಾಡಿದ್ದು, ಎರಡು ಕಂಪನಿಗಳು ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಿದ್ದು, ಹತ್ತು ವಿಭಿನ್ನ ಚಿಕಿತ್ಸೆಕ ಏಜೆಂಟ್ ಗಳು ಪ್ರಯೋಗ ಮಾಡುತ್ತಿದ್ದಾರೆ. ಕೆಲವರು ನಂಬಲಾಗದಷ್ಟು ಯಶಸ್ವಿಯಾಗಿದ್ದಾರೆ ಎಂದರು. 

ಮತ್ತೆ 15 ಸಂಭಾವ್ಯ ಚಿಕಿತ್ಸೆಗಳ ಪ್ರಯೋಗಗಳ ಕಾರ್ಯ ವೇಗವಾಗಿ ನಡೆಯುತ್ತಿದೆ. ಜೊತೆಗೆ, ನ್ಯೂಜೆರ್ಸಿ ಹಾಗೂ ನ್ಯೂಯಾರ್ಕ್ ನ ಕೋವಿಡ್-19 ರೋಗಿಗಳನ್ನು ನೌಕಾಪಡೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕೊರೋನಾ ವೈರಸ್ ವಿರುದ್ಧದ ಲಸಿಕೆ ಹಾಗೂ ಚಿಕಿತ್ಸಾ ಕಾರ್ಯಗಳು ವೇಗವಾಗಿ ನಡೆಯುತ್ತಿದ್ದು, ಪರಿಣಾಮಕಾರಿ ಚಿಕಿತ್ಸೆ ಸಂಶೋಧನೆ ಕಂಡುಹಿಡಿಯುವಲ್ಲಿ 70ಕ್ಕೂ ಹೆಚ್ಚು ರಾಷ್ಟ್ರಗಳು ವಿಶ್ವ ಆರೋಗ್ಯ ಸಂಸ್ಥೆ ಜೊತೆ ಕೈ ಜೋಡಿಸಿವೆ. 20 ಸಂಸ್ಥೆಗಳು ಮತ್ತು ಕಂಪನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಮುನ್ನುಗ್ಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ. ಟೆಡ್ರೊಸ್ ಅದಾನೊಮ್ ಘೆಬ್ರಿಯೆಸಸ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com