ಚೀನಾದಲ್ಲಿ ಹೊಸ 100 ಕೊವಿದ್-19 ಪ್ರಕರಣಗಳು ದೃಢ: ಸಾವು ವರದಿಯಿಲ್ಲ-ಆರೋಗ್ಯ ಆಯೋಗ
ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ 99 ಹೊಸ ಕರೋನವೈರಸ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 97 ಮಂದಿ ವಿದೇಶದಿಂದ ಬಂದವರಾಗಿದ್ದಾರೆ ಎಂದು ದೇಶದ ರಾಷ್ಟ್ರೀಯ ಆರೋಗ್ಯ ಆಯೋಗ ಭಾನುವಾರ ತಿಳಿಸಿದೆ.

ಬೀಜಿಂಗ್: ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ 99 ಹೊಸ ಕರೋನವೈರಸ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 97 ಮಂದಿ ವಿದೇಶದಿಂದ ಬಂದವರಾಗಿದ್ದಾರೆ ಎಂದು ದೇಶದ ರಾಷ್ಟ್ರೀಯ ಆರೋಗ್ಯ ಆಯೋಗ ಭಾನುವಾರ ತಿಳಿಸಿದೆ.
ಶನಿವಾರ ಚೀನಾದಲ್ಲಿ 46 ಹೊಸ ಕರೋನವೈರಸ್ ಪ್ರಕರಣಗಳು (ಈ ಪೈಕಿ 42 ಮಂದಿ ವಿದೇಶದಿಂದ ಬಂದವರು) ಮತ್ತು 3 ಹೊಸ ಸಾವುಗಳು ಸಂಭವಿಸಿವೆ. ಕಳೆದ 24 ಗಂಟೆಗಳಲ್ಲಿ ಕೊವಿದ್-19 ನಿಂದ ಯಾವುದೇ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಚೀನಾದ ಆರೋಗ್ಯ ಆಯೋಗ ಭಾನುವಾರ ತಿಳಿಸಿದೆ.
ಚೀನಾದ ಮುಖ್ಯ ಭೂಭಾಗದಲ್ಲಿ 1,130 ಕ್ಕೂ ಹೆಚ್ಚು ಜನರು ಕೊವಿದ್-19 ಗೆ ಚಿಕಿತ್ಸೆ ಪಡೆಯುತ್ತಿದ್ದು, 139 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


