WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ

ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ  ಅಸಮಾಧಾನ ವ್ಯಕ್ತಪಡಿಸಿದೆ.
ಅಂಟಾನಿಯೋ ಗುಟೆರೆಸ್
ಅಂಟಾನಿಯೋ ಗುಟೆರೆಸ್

ವಾಷಿಂಗ್ಟನ್: ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ  ಅಸಮಾಧಾನ ವ್ಯಕ್ತಪಡಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ ಅಧ್ಯಕ್ಷ ಅಂಟಾನಿಯೋ ಗುಟೆರೆಸ್ ಅವರು, ಇಡೀ ವಿಶ್ವವೇ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರ ನಿರ್ಣಾಯಕವಾದದ್ದು, ಎಂತಹುದೇ ಪರಿಸ್ಥಿತಿಯಲ್ಲೂ ವಿಶ್ವ  ಆರೋಗ್ಯ ಸಂಸ್ಥೆಯ ಕಾರ್ಯಕ್ಕೆ ಮತ್ತು ಯೋಜನೆಗಳಿಗೆ ಅಡೆತಡೆಯಾಗಬಾರದು. ಮಾನವೀಯತೆ ಈ ಹೋರಾಟ ನಮ್ಮೆಲ್ಲರದ್ದು. ಹೀಗಾಗಿ ಅಮೆರಿಕ ನಿರ್ಧಾರ ಈ ಸಮಯಕ್ಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಕೊರೋನಾ ವೈರಸ್ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಹೋರಾಡುತ್ತಿದ್ದು, ಆರೋಗ್ಯ ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ವೈರಸ್ ಮತ್ತಷ್ಟು ಜೀವ ಹಾನಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಾವು ಇಂತಹ ಕಠಿಣ ಸಂದರ್ಭದಲ್ಲಿ ನಾವು ಒಗ್ಗಟ್ಟು ಪ್ರದರ್ಶನ  ಮಾಡಬೇಕು. WHO ಹೋರಾಟಕ್ಕೆ ಬೆಂಬಲವಾಗಿ ನಿಂತು ಸಾಂಘಿಕವಾಗಿ ವೈರಸ್ ತೊಲಗಿಸಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com