ಸಂಕಷ್ಟದ ಸಮಯದಲ್ಲಿ ಕೀಳು ರಾಜಕೀಯ: ಭಾರತದ ಲಾಕ್ ಡೌನ್ ಬಿಂಬಿಸಲು ಪಾಕ್ ಚಿತ್ರ ಬಳಸಿದ ಕಾಂಗ್ರೆಸ್ ನಾಯಕ!
ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿರುವುದು ಸಂಕಷ್ಟಕ್ಕೆ ಸಿಲುಕಿದೆ. ಇನ್ನು ಕೇಂದ್ರ ಸರ್ಕಾರ ಲಾಕ್ ಡೌನ್ ಕಠಿಣ ನಿರ್ಧಾರವನ್ನು ಕೈಗೊಂಡಿದ್ದು ಭಾರತದ ಲಾಕ್ ಡೌನ್ ಪರಿಸ್ಥಿತಿಯನ್ನು ಬಿಂಬಿಸಲು ಕಾಂಗ್ರೆಸ್ ನಾಯಕ ಪಾಕ್ ಚಿತ್ರವನ್ನು ಬಳಸಿ ವಿವಾದಕ್ಕೀಡಾಗಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿರುವುದು ಸಂಕಷ್ಟಕ್ಕೆ ಸಿಲುಕಿದೆ. ಇನ್ನು ಕೇಂದ್ರ ಸರ್ಕಾರ ಲಾಕ್ ಡೌನ್ ಕಠಿಣ ನಿರ್ಧಾರವನ್ನು ಕೈಗೊಂಡಿದ್ದು ಭಾರತದ ಲಾಕ್ ಡೌನ್ ಪರಿಸ್ಥಿತಿಯನ್ನು ಬಿಂಬಿಸಲು ಕಾಂಗ್ರೆಸ್ ನಾಯಕ ಪಾಕ್ ಚಿತ್ರವನ್ನು ಬಳಸಿ ವಿವಾದಕ್ಕೀಡಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಮತ್ತು ವಕ್ತಾರ ಅಮೆರಿಕೈ ವಿ ನಾರಾಯಣನ್ ಅವರು ತೀವ್ರವಾಗಿ ಕಾಲು ಒಡೆದ ಮಕ್ಕಳ ಫೋಟೋವನ್ನು ಟ್ವೀಟ್ ಮಾಡಿ ಈ ಸದ್ಯದ ಭಾರತದ ಪರಿಸ್ಥಿತಿ ಎಂದು ಬರೆದುಕೊಂಡಿದ್ದರು.
ದೇಶಾದ್ಯಂತ ಮತ್ತೆ ಲಾಕ್ ಡೌನ್ ವಿಸ್ತರಿಸಿರುವುದನ್ನು ಖಂಡಿಸಿ ತಮಿಳಿನಲ್ಲಿ ಬರೆದು ಟ್ವೀಟ್ ಮಾಡಿದ್ದರು. ಈ ಪೋಟೋ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಈ ಚಿತ್ರ 2018ರಲ್ಲಿ ಪ್ರಕಟವಾಗಿರುವುದಾಗಿ ತಿಳಿದುಬಂದಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಸಜವಾಲಾಬಾದ್ ಪ್ರದೇಶದ ಮಕ್ಕಳ ಪಾದಗಳಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ. ಇದು ಪಾಕಿಸ್ತಾನದ ಪ್ರಜಾಪ್ರಭುತ್ವದ ನೈಜ ಮುಖ ಎಂಬ ಹೆಸರಿನಲ್ಲಿ ಲೇಖನ ಪ್ರಕಟವಾಗಿತ್ತು. ಈ ಫೋಟೋವನ್ನೇ ನಾರಾಯಣನ್ ಬಳಸಿರುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


