ಕೋವಿಡ್‍-19: ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 7.98 ಕೋಟಿಗೆ ಏರಿಕೆ

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಟ್ಟು ಸೋಂಕಿತರ ಸಂಖ್ಯೆ 7.98 ಕೋಟಿಗೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಾಸ್ಕೋ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಟ್ಟು ಸೋಂಕಿತರ ಸಂಖ್ಯೆ 7.98 ಕೋಟಿಗೆ ಏರಿಕೆಯಾಗಿದೆ. 

ಕೊರೋನಾ ವೈರಸ್ ಸೋಂಕಿಗೆ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ 79,815,237 ಮಂದಿ ಒಳಗಾಗಿದ್ದರು, ಸಾವಿನಸ ಸಂಖ್ಯೆ 17,50,057ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಈ ವರೆಗೂ ಪತ್ತೆಯಾಗಿರುವ ಒಟ್ಟು 79,815,237 ಮಂದಿ ಸೋಂಕಿತರ ಪೈಕಿ ಈ ವರೆಗೂ  44,978,603 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಸಕ್ರಿಯ ಪ್ರಕರಣಗಳು 21,979,968ಕ್ಕೆ ಇಳಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ವಿಶ್ವದ ಅತೀ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಟಾಪ್ 10 ರಾಷ್ಟ್ರಗಳಲ್ಲಿ ಮೊದಲನೇ ಸ್ಥಾನದಲ್ಲಿರುವ ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 19,210,166ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 338,263ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com