ಪ್ರಧಾನಿ ಮೋದಿ, ರಾಷ್ಟ್ರಪತಿಗೆ ಹೊಸ ವರ್ಷದ ಶುಭ ಕೋರಿದ ಪುಟಿನ್, 2021ರಲ್ಲೂ ಸಹಕಾರ ಮುಂದುವರಿಕೆ ಆಶಯ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದು,
ಮೋದಿ-ಪುಟಿನ್ (ಸಂಗ್ರಹ ಚಿತ್ರ)
ಮೋದಿ-ಪುಟಿನ್ (ಸಂಗ್ರಹ ಚಿತ್ರ)
Updated on: 

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದು, 2021ರಲ್ಲಿಯೂ ಉಭಯ ದೇಶಗಳ ನಡುವಿನ ಸಹಕಾರ ಮುಂದುವರಿಸುವ ಆಶಯ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷದಲ್ಲಿ ಉಭಯ ದೇಶಗಳು ರಚನಾತ್ಮಕ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುತ್ತವೆ ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಸಂಘಟಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ಮೋದಿಯವರಿಗೆ ಪ್ರತ್ಯೇಕ ಸಂದೇಶ ರವಾನಿಸಿರುವ ಪುಟಿನ್, 2020ರ ತೊಂದರೆಗಳ ನಡುವೆಯೂ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವು ವಿಶ್ವಾಸದಿಂದ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.

"ರಷ್ಯಾ ಮತ್ತು ಭಾರತವು ಕಾರ್ಯತಂತ್ರದ ಸಹಭಾಗಿತ್ವದ ಸಂಬಂಧಗಳಿಂದ ಸಂಪರ್ಕ ಹೊಂದಿವೆ, ಇದು 2020ರಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ಸೇರಿದಂತೆ ತೊಂದರೆಗಳು ಮತ್ತು ಸಮಸ್ಯೆಗಳ ಹೊರತಾಗಿಯೂ ವಿಶ್ವಾಸದಿಂದ ಅಭಿವೃದ್ಧಿ ಹೊಂದುತ್ತಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com