ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯೊಂದಿನ ಸಭೆ
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯೊಂದಿನ ಸಭೆ

ಕಾಶ್ಮೀರ ವಿವಾದ: ಮತ್ತೆ ವಿಶ್ವಸಂಸ್ಥೆಯಲ್ಲಿ ಪಾಕ್ ತಗಾದೆ, ಕಣಿವೆ ರಾಜ್ಯದ ಮಾನವ ಹಕ್ಕುಗಳ ಪರಿಸ್ಥಿತಿ ಪರಿಶೀಲಿಸುವಂತೆ ಆಗ್ರಹ

ಕಾಶ್ಮೀರ ವಿಚಾರದಲ್ಲಿ ವಿಶ್ವಮಟ್ಟದಲ್ಲಿ ಪದೇ ಪದೇ ಮುಖಭಂಗವಾಗುತ್ತಿದ್ದರೂ, ಏನೂ ಆಗದಂತೆ ವರ್ತಿಸುತ್ತಿರುವ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಿಚಾರವನ್ನು ಪ್ರಸ್ತಾಪಿಸಿ, ಕಣಿವೆ ರಾಜ್ಯದ ಮಾನವ ಹಕ್ಕುಗಳ ಪರಿಸ್ಥಿತಿ ಕುರಿತು ಗಮನ ಹರಿಸುವಂತೆ ಆಗ್ರಹಿಸಿದೆ.

ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ವಿಶ್ವಮಟ್ಟದಲ್ಲಿ ಪದೇ ಪದೇ ಮುಖಭಂಗವಾಗುತ್ತಿದ್ದರೂ, ಏನೂ ಆಗದಂತೆ ವರ್ತಿಸುತ್ತಿರುವ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಿಚಾರವನ್ನು ಪ್ರಸ್ತಾಪಿಸಿ, ಕಣಿವೆ ರಾಜ್ಯದ ಮಾನವ ಹಕ್ಕುಗಳ ಪರಿಸ್ಥಿತಿ ಕುರಿತು ಗಮನ ಹರಿಸುವಂತೆ ಆಗ್ರಹಿಸಿದೆ.

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯೊಂದಿನ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್ 5 ರಂದು ಭಾರತ ರದ್ದುಪಡಿಸಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯಗಳಲ್ಲಿ ಪ್ರತಿಪಾದಿಸಿರುವಂತೆ, ಕಾಶ್ಮೀರದ ಜನರು ತಮ್ಮ ಸ್ವ-ನಿರ್ಣಯದ ಹಕ್ಕನ್ನು ಸಾಕಾರಗೊಳಿಸುವ ಬದ್ಧತೆಯನ್ನು ಗೌರವಿಸಲು ವಿಶ್ವಸಂಸ್ಥೆಯತ್ತ ಮುಖ ಮಾಡಿ ನೋಡುತ್ತಿದ್ದಾರೆ. 

ಭಾರತದ ಯುದ್ಧ ಕುರಿತ ವಾಕ್ಚಾತುರ್ಯದಿಂದ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ತೀವ್ರಗೊಂಡಿದೆ. ಮತ್ತು ಇತರೆ ಆಕ್ರಮಣಕಾರಿ ಕ್ರಮಗಳು ಈ ಪ್ರದೇಶದಲ್ಲಿ ಶಾಂತಿ ಹಾಗೂ ಸುರಕ್ಷತೆಯನ್ನು ಹದಗೆಡಿಸಿದೆ. ವಿಶ್ವದ ಗಮನ ಸೆಳೆಯುವ ಸಲುವಾಗಿ ಧ್ವಜ ಕಾರ್ಯಾಚರಣೆಯನ್ನು ಭಾರತ ನಡೆಸಿದ್ದು, ಕಾಶ್ಮೀರದಲ್ಲಿ ನಡೆದ ಈ ಬೆಳವಣಿಗೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com