ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಆದರೆ ಮೋದಿಗಾಗಿ ಭಾರತಕ್ಕೆ ಬರುತ್ತಿದ್ದೇನೆ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸಕ್ಕೆ ಬರುತ್ತಿದ್ದು ಭೇಟಿ ಮುನ್ನ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಒಳ್ಳೆಯ ಸ್ನೇಹಿತ ಅವರಿಗಾಗಿ ಭಾರತಕ್ಕೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ. 
ಮೋದಿ-ಟ್ರಂಪ್
ಮೋದಿ-ಟ್ರಂಪ್
Updated on: 

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸಕ್ಕೆ ಬರುತ್ತಿದ್ದು ಭೇಟಿ ಮುನ್ನ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಒಳ್ಳೆಯ ಸ್ನೇಹಿತ ಅವರಿಗಾಗಿ ಭಾರತಕ್ಕೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ. 

ಫೆಬ್ರವರಿ 24ರಂದು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಲಿದ್ದು ಎರಡು ದಿನಗಳ ಕಾಲ ಭಾರತದಲ್ಲಿರುತ್ತಾರೆ. ಭಾರತ ಭೇಟಿ ಕುರಿತಂತೆ ಮಾತನಾಡಿದ ಟ್ರಂಪ್ ನಾವು ಭಾರತದ ಜೊತೆ ದೊಡ್ಡ ಒಪ್ಪಂದವನ್ನು ಮಾಡಿಕೊಳ್ಳುತ್ತಿದ್ದೇವೆ. ಆದರೆ ಈ ಒಪ್ಪಂದ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮೊದಲು ಅಥವಾ ನಂತರವೋ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದರು.

ಈ ವೇಳೆ ವ್ಯಾಪಾರ ಒಪ್ಪಂದ ವಿಚಾರದಲ್ಲಿ ಭಾರತ ನಮ್ಮನ್ನು ಉತ್ತಮವಾಗಿ ನಡೆಸಿಕೊಂಡಿಲ್ಲ. ಆದರೆ ಪ್ರಧಾನಿ ಮೋದಿ ಅವರ ಕಾರ್ಯವೈಖರಿ ಉತ್ತಮವಾಗಿದ್ದು ಹೀಗಾಗಿ ಭಾರತಕ್ಕೆ ಬರಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

ಟ್ರಂಪ್ ಭಾರತ ಪ್ರವಾಸದ ವೇಳೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ಇನ್ನು ಇದೇ ಕ್ರೀಡಾಂಗಣದಲ್ಲಿ 3 ಗಂಟೆಗಳ ಕಾಲ ಕೆಮ್ ಚೊ ಟ್ರಂಪ್ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com