ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ

ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 14.2 ಕೋಟಿ ಜನರು ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 14.2 ಕೋಟಿ ಜನರು ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದಾದ್ಯಂತ ಸೋಂಕಿತರ ಸಂಖ್ಯೆ 14,231,248ಕ್ಕೆ ತಲುಪಿದ್ದು, 601,213 ದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ. 

ಇನ್ನು ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 3,707,023ಕ್ಕೆ ಏರಿಕೆಯಾಗಿದ್ದು, 140,10 ಸಾವನ್ನಪ್ಪಿದ್ದಾರೆ. ಬ್ರೆಜಿಲ್ ನಲ್ಲಿ  2,074,860 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 78,772 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಸೋಂಕಿನ ಟಾಪ್ 10 ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com