ಪಾಕ್'ನಲ್ಲಿ ಘರ್ಷಣೆ: 5 ಪೊಲೀಸರು ಸೇರಿ 7 ಮಂದಿ ಸಾವು

ಉತ್ತರ ಪಾಕಿಸ್ತಾನದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಜೈಲಿನಿಂದ ತಪ್ಪಿಸಿಕೊಂಡಿದ್ದವರ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಐವರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪಾಕ್ ಪೊಲೀಸರು
ಪಾಕ್ ಪೊಲೀಸರು
Updated on: 

ಇಸ್ಲಾಮಾಬಾದ್: ಉತ್ತರ ಪಾಕಿಸ್ತಾನದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಜೈಲಿನಿಂದ ತಪ್ಪಿಸಿಕೊಂಡಿದ್ದವರ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಐವರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳಂತೆ, ಡೈಮರ್ ಜಿಲ್ಲೆಯ ಚಿಲಾಸ್ ಪ್ರದೇಶದ ರೊನೈ ಎಂಬಲ್ಲಿ ಪೊಲೀಸರು ಮಂಗಳವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿಯ ಮೇಲೆ ಪರಾರಿಯಾಗಿದ್ದವರ ಗುಂಪು ಗುಂಡು ಹಾರಿಸಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿವೆ. ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಆದರೆ ದಾಳಿಯ ನಂತರ ಪಲಾಯನಗೈದ ದಾಳಿಕೋರರ ಸುಳಿವು ದೊರೆತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com