ಯಾವುದೇ ಸಂಶಯವಿಲ್ಲ, ನಿಗದಿಯಂತೆ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ: ಜಪಾನ್ ಪ್ರಧಾನಿ ಶಿಂಜೋ ಅಬೆ

ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಮುಂದೂಡುವುದು, ಇಲ್ಲವೆ ರದ್ದುಗೊಳಿಸುವುದು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸ್ಸು ಅವಲಂಭಿಸಿದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಹೇಳುತ್ತಿದ್ದರೆ, ಮತ್ತೊಂದೆಡೆ ನಿಗಧಿತ ಸಮಯದಂತೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಜಪಾನ್ ಪ್ರಧಾನಿ ಶಿಂಜೊ ಅಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿಂಜೋ ಅಬೆ
ಶಿಂಜೋ ಅಬೆ
Updated on

ಟೋಕಿಯೊ: ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಮುಂದೂಡುವುದು, ಇಲ್ಲವೆ ರದ್ದುಗೊಳಿಸುವುದು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸ್ಸು ಅವಲಂಭಿಸಿದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಹೇಳುತ್ತಿದ್ದರೆ, ಮತ್ತೊಂದೆಡೆ ನಿಗಧಿತ ಸಮಯದಂತೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಜಪಾನ್ ಪ್ರಧಾನಿ ಶಿಂಜೊ ಅಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ವಿಷಯದಲ್ಲಿ ಐಓಸಿಯೊಂದಿಗೆ ಸೇರಿ ಕೆಲಸ ಮಾಡುತ್ತಿದ್ದೇವೆ. ವಿಶ್ವದಾದ್ಯಂತ ಬಹುತೇಕ ಕ್ರೀಡಾ ಕೂಟಗಳು ಮುಂದೂಡಿರುವ ಹಿನ್ನಲೆಯಲ್ಲಿ ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಸಹ ಮರು ನಿಗದಿ ಪಡಿಸುವುದು ಸೂಕ್ತ ಎಂಬ ವಾದಗಳು ಹೆಚ್ಚುತ್ತಿವೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ, ಒಲಿಂಪಿಕ್ಸ್ ಆಯೋಜನೆಯನ್ನು ಮುಂದೂಡುವುದಿಲ್ಲ ನಿಗದಿಯಂತೆ ಜೂನ್ 24 ರಿಂದ ಕ್ರೀಡಾ ಕೂಟ ನಡೆಯಲಿವೆ ಎಂದು ತಿಳಿಸಿದ್ದಾರೆ.
 
ಈ ಸಂಬಂಧ ಎಲ್ಲ ಭಾಗಿದಾರರೊಂದಿಗೆ ಸಂಪರ್ಕದಲ್ಲಿದ್ದೇವೆ. ಹೆಚ್ಚುತ್ತಿರುವ ಕೊರಿನಾ ವೈರಸ್ ಪರಿಸ್ಥಿತಿ, ಮತ್ತೊಂದೆಡೆ ಒಲಿಂಪಿಕ್ಸ್ ಕ್ರೀಡಾಕೂಟ ನಿರ್ವಹಣೆ ಅಂಶಗಳ ಬಗ್ಗೆ ತಾವು ಹೆಚ್ಚಿನ ಗಮನ ಹರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಸಂದರ್ಶನವೊಂದರಲ್ಲಿ ಮಾತನಾಡಿ, ಈವರೆಗೆ ವಿಶ್ವ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ನಡೆಸಲು ಸಿದ್ದತೆಗಳನ್ನು ಮಾಡುತ್ತಿದ್ದೇವೆ. ಆದರೆ ಯಾವುದೇ ನಿರ್ಧಾರ ಕೈಗೊಂಡರೂ ಅದು ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯನ್ನು ಅವಲಂಬಿಸಿರುತ್ತದೆ ನಮ್ಮ ಪ್ರತಿನಿಧಿಗಳು ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜುಲೈ 24 ರಿಂದ ಆಗಸ್ಟ್ 8 ರವರೆಗೆ ಟೋಕಿಯೊ ಒಲಿಂಪಿಕ್ಸ್‌ಗಾಗಿ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com