ಆಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವ್ಯಕ್ತಿಯಿಂದ ದಾಳಿ: 7 ಪೊಲೀಸರು ಸಾವು

ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಭಾನುವಾರ ತಾಲಿಬಾನ್ ಸಂಘಟನೆಗೆ ಸಹಾಯ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೊಬ್ಬ ನಡೆಸಿದ ದಾಳಿಯಲ್ಲಿ ಏಳು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವ್ಯಕ್ತಿಯಿಂದ ದಾಳಿ: 7 ಪೊಲೀಸರು ಸಾವು
ಆಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವ್ಯಕ್ತಿಯಿಂದ ದಾಳಿ: 7 ಪೊಲೀಸರು ಸಾವು
Updated on

ಆಫ್ಘಾನಿಸ್ತಾನ: ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಭಾನುವಾರ ತಾಲಿಬಾನ್ ಸಂಘಟನೆಗೆ ಸಹಾಯ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೊಬ್ಬ ನಡೆಸಿದ ದಾಳಿಯಲ್ಲಿ 7 ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಕಾಲಮಾನ ಮಧ್ಯರಾತ್ರಿ 2 ಗಂಟೆ ವೇಳೆಗೆ ಜಾರಿ ಜಿಲ್ಲೆಯ ಚಾರ್ಷಾಕಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರ ಜಮಾಲ್ ಬರಿಕ್ಜೈ ಕ್ಸಿನ್ಹುವಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ದಾಳಿ ನಡೆಸಿದ ನಂತರ ವ್ಯಕ್ತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಅಪರಾಧಿಯನ್ನು ಬಂಧಿಸಲು ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com