ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ
ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ

ದಕ್ಷಿಣ ಏಷ್ಯಾದಲ್ಲಿ ಸಾರ್ವಜನಿಕ ಆರೋಗ್ಯ ಬೆದರಿಕೆ ವಿರುದ್ಧ ಹೋರಾಡುವ ಸಂಸ್ಥೆ ಸ್ಥಾಪನೆ- ಶೇಖ್ ಹಸೀನಾ

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಮೂಹಿಕ ಪರಿಣತಿ ಮತ್ತು ಸಂಪನ್ಮೂಲಗಳೊಂದಿಗೆ ಸಾರ್ಕ್ ರಾಷ್ಟ್ರಗಳ ನಡುವೆ ಸಮನ್ವಯತೆ ರೂಪಿಸುವ ಅಗತ್ಯವನ್ನು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
Published on

ಢಾಕಾ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಮೂಹಿಕ ಪರಿಣತಿ ಮತ್ತು ಸಂಪನ್ಮೂಲಗಳೊಂದಿಗೆ ಸಾರ್ಕ್ ರಾಷ್ಟ್ರಗಳ ನಡುವೆ ಸಮನ್ವಯತೆ ರೂಪಿಸುವ ಅಗತ್ಯವನ್ನು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.

ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ಯಾವುದೇ ಸಾರ್ವಜನಿಕ ಆರೋಗ್ಯ ಬೆದರಿಕೆಯನ್ನು ತಡೆಯಲು ಮತ್ತು ಇದರ ವಿರುದ್ಧ ಹೋರಾಡಲು ಸಂಸ್ಥೆಯೊಂದನ್ನು ಸ್ಥಾಪಿಸುವ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ

ಭವಿಷ್ಯದಲ್ಲಿ ದಕ್ಷಿಣ ಏಷ್ಯಾದಲ್ಲಿ ಯಾವುದೇ ಸಾರ್ವಜನಿಕ ಆರೋಗ್ಯ ಬೆದರಿಕೆಯನ್ನು ತಡೆಗಟ್ಟಲು ಮತ್ತು ಹೋರಾಡಲು ಒಂದು ಸಂಸ್ಥೆಯನ್ನು ಸ್ಥಾಪನೆ ತುಂಬಾ ಅಗತ್ಯವಾಗಿದೆ. ಸಾರ್ಕ್‍ ಸದಸ್ಯ ರಾಷ್ಟ್ರಗಳು ದಯೆಯಿಂದ ಒಪ್ಪಿದರೆ ಅಂತಹ ಸಂಸ್ಥೆಯನ್ನು ಆತಿಥ್ಯ ವಹಿಸಲು ಬಾಂಗ್ಲಾದೇಶಕ್ಕೆ ಸಂತೋಷವಾಗುತ್ತದೆ ಎಂದು ಶೇಖ್‍ ಹಸೀನಾ ಹೇಳಿದ್ದಾರೆ.

ಭಾನುವಾರ ಸಂಜೆ ಸಾರ್ಕ್ ರಾಷ್ಟ್ರಗಳ ನಾಯಕರ ನಡುವಿನ ವೀಡಿಯೊ ಸಂವಾದದಲ್ಲಿ ಅವರು ಪಾಲ್ಗೊಂಡು ಈ ವಿಷಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com