ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ವಿಜಯ ಸಾಧಿಸಲಿದೆ: ಚೀನಾ ವಿಶ್ವಾಸ

ಪದೇ ಪದೇ ಗಡಿ ಕ್ಯಾತೆ ತೆಗೆದು ಭಾರತೀಯರ ಕೆಂಗಣ್ಣಿಗೆ ಗುರಿಯಾಗುತ್ತಿದ್ದ ಚೀನಾ, ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೈಜೋಡಿಸಿರುವ ಚೀನಾ, ಭಾರತಕ್ಕೆ ನೆರವು ನೀಡುವುದಾಗಿ ಘೋಷಣೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪದೇ ಪದೇ ಗಡಿ ಕ್ಯಾತೆ ತೆಗೆದು ಭಾರತೀಯರ ಕೆಂಗಣ್ಣಿಗೆ ಗುರಿಯಾಗುತ್ತಿದ್ದ ಚೀನಾ, ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೈಜೋಡಿಸಿರುವ ಚೀನಾ, ಭಾರತಕ್ಕೆ ನೆರವು ನೀಡುವುದಾಗಿ ಘೋಷಣೆ ಮಾಡಿದೆ. 

ಕೊರೋನಾ ವೈರಸ್ ನಿಂದ ಈಗಾಗಲೇ ಬಹುತೇಕ ಮುಕ್ತಿ ಪಡೆದುಕೊಂಡಿರುವ ಸ್ಥಿತಿಯಲ್ಲಿರುವ ಚೀನಾ, ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡುತ್ತಿರುವ ಭಾರತಕ್ಕೆ ನೆರವು ನೀಡುವುದಾಗಿ ಘೋಷಣೆ ಮಾಡಿದೆ. 

ವೈರಸ್ ನಿಂದಾಗಿ ಭಾರೀ ಸಂಕಷ್ಟದಲ್ಲಿರುವ ಇಟಲಿಗೂ ಈಗಾಗಲೇ ಚೀನಾ ನೆರವು ಘೋಷಣೆ ಮಾಡಿದ್ದು, ಇದೀಗ ಭಾರತಕ್ಕೂ ನೆರವು ನೀಡುವುದಾಗಿ ಘೋಷಣೆ ಮಾಡಿದೆ. 

ಈ ಕುರಿತು ಚೀನಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಅಧಿಕಾರಿ ಜೀ.ರೊಂಗ್ ಅವರು ಮಾಹಿತಿ ನೀಡಿದ್ದು, ಭಾರತಕ್ಕೆ ನೆರವು ನೀಡಲು ಚೀನಾ ಮಂದಾಗಿದೆ. ನಮ್ಮ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಬೆಂಬಲ ಹಾಗೂ ನೆರವು ನೀಡಲು ನಾವು ಸಿದ್ಧರಿದ್ದೇವೆಂದು ಹೇಳಿದೆ. 

ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾಗ ಭಾರತ ವೈದ್ಯಕೀಯ ನೆರವು ನೀಡಿತ್ತು. ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತೀಯರು ಚೀನಾಗೆ ಬೆಂಬಲ ನೀಡಿದ್ದರು. ಇದಕ್ಕಾಗಿ ನಾವು ಭಾರತವನ್ನು ಪ್ರಶಂಸಿಸುತ್ತೇವೆ. ಹಾಗೂ ಅದಕ್ಕಾಗಿ ಧನ್ಯವಾದಗಳನ್ನೂ ಹೇಳುತ್ತಿದ್ದೇವೆಂದು ತಿಳಿಸಿದ್ದಾರೆ. 

ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಕೂಡ ಆರಂಭಿಕ ದಿನಗಳಲ್ಲಿಯೇ ವಿಜಯ ಸಾಧಿಸಲಿದೆ. ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ಭಾರತ ಹಾಗೂ ಇತರೆ ರಾಷ್ಟ್ರಗಳಿಗೆ ಬೆಂಬಲ ನೀಡುವ ಮೂಲಕ ವೈರಸ್ ವಿರುದ್ಧದ ಹೋರಾಟವನ್ನು ನಾವು ಮುಂದುವರೆಸುತ್ತೇವೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com