8 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 38,800 ಬಲಿ!
ಚೀನಾವನ್ನು ಹಿಂಡಿ ಹಿಪ್ಪೆಕಾಯಿ ಮಾಡಿದ್ದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ಜಿಗಣೆಯಂತೆ ರಕ್ತ ಹಿರುತ್ತಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ.

ನವದೆಹಲಿ: ಚೀನಾವನ್ನು ಹಿಂಡಿ ಹಿಪ್ಪೆಕಾಯಿ ಮಾಡಿದ್ದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ಜಿಗಣೆಯಂತೆ ರಕ್ತ ಹಿರುತ್ತಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ.
ಅಮೆರಿಕಾ, ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ ಸ್ಪೇನ್ ಸನಿಹದಲ್ಲಿದೆ. ಅಮೆರಿಕದಲ್ಲಿ 1,64,400 ಮಂದಿ ಸೋಂಕಿನಿಂದ ಬಳಲುತ್ತಿದ್ದು 3,173 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1,02,000 ಸೋಂಕಿತರಿದ್ದು ಸಾವಿನ ಸಂಖ್ಯೆ ಮಾತ್ರ 11 ಸಾವಿರ ಗಡಿ ದಾಟಿದೆ.
ಇನ್ನು ಸ್ಪೇನ್ ನಲ್ಲೂ ಸಾವಿನ ಸಂಖ್ಯೆ ಏರಿಕೆಯಾಗುತ್ತದೆ. ಇಂದು ಒಂದೇ ದಿನ 473 ಮಂದಿ ಮೃತಪಟ್ಟಿದ್ದು 8,189 ಮಂದಿ ಬಲಿಯಾಗಿದ್ದಾರೆ. ಇನ್ನು 95 ಸಾವಿರ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಭಾರತದಲ್ಲಿ 1400 ಗಡಿ ದಾಟಿದ ಸೋಂಕು
ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಇನ್ನು 1400 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


