ವಿದೇಶ

ಅಮೆರಿಕದಲ್ಲಿ ಕೊರೊನಾ ಸಂಬಂಧಿತ ಸಾವು ಲಕ್ಷ ದಾಟಲ್ಲ: ಡೊನಾಲ್ಡ್ ಟ್ರಂಪ್ ಭರವಸೆ

ಅಮೆರಿಕದಲ್ಲಿ ಕೊರೊನಾ ಸೋಂಕು ಸಂಬಂಧಿತ ಸಾವು ಒಂದು ಲಕ್ಷದೊಳಗಿರಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕದಲ್ಲಿ ಕೊರೊನಾ ಸಂಬಂಧಿತ ಸಾವು ಲಕ್ಷ ದಾಟಲ್ಲ: ಡೊನಾಲ್ಡ್ ಟ್ರಂಪ್ ಭರವಸೆ
ಡೊನಾಲ್ಡ್ ಟ್ರಂಪ್
Published On :

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕು ಸಂಬಂಧಿತ ಸಾವು ಒಂದು ಲಕ್ಷದೊಳಗಿರಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹೇಳಿದ್ದಾರೆ.

ಶ್ವೇತಭವನದಲ್ಲಿ ಅವರು, ಒಂದು ಲಕ್ಷಕ್ಕಿಂತ ಕಡಿಮೆ ಸಾವಿನ ಸ್ಥಿತಿ ಇರಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕೊರೊನಾ ಸೋಂಕಿನ ಸಾವಿನ ಸಂಖ್ಯೆ ಸುಮಾರು 60 ರಿಂದ 70 ಸಾವಿರದಷ್ಟು ಇರಲಿದೆ ಎಂದು ಇದಕ್ಕೂ ಮುನ್ನ ಟ್ರಂಪ್ ಆಡಳಿತ ಅಂದಾಜಿಸಿತ್ತು.

ಅಮೆರಿಕದಲ್ಲಿ ಈವರೆಗೆ 65,88 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು 11,34,084 ಜನರು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.