ಕಾಬೂಲ್ ವಿಶ್ವವಿದ್ಯಾನಿಲಯದ ಮೇಲೆ ಉಗ್ರರ ಪೈಶಾಚಿಕ ದಾಳಿ: 20 ಮಂದಿ ಹತ್ಯೆ 

ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನಲ್ಲಿರುವ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 20 ಮಂದಿ ಹತ್ಯೆಯಾಗಿದ್ದು,  40 ಮಂದಿ ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಭದ್ರತಾ ಪಡೆಗಳು
ಭದ್ರತಾ ಪಡೆಗಳು

ಅಪ್ಘಾನಿಸ್ತಾನ: ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನಲ್ಲಿರುವ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 20 ಮಂದಿ ಹತ್ಯೆಯಾಗಿದ್ದು,  40 ಮಂದಿ ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಘಟನೆಯ ನಂತರ ಟ್ವೀಟ್ ಮಾಡಿರುವ ರಾಷ್ಟ್ರೀಯ ಸಾಮರಸ್ಯಕ್ಕಾಗಿ ಉನ್ನತ ಮಂಡಳಿಯ ಮುಖ್ಯಸ್ಥ ಅಬ್ದುಲ್ಲಾ ಅಬ್ದುಲ್ಲಾ, ಕಾಬೂಲ್ ವಿಶ್ವವಿದ್ಯಾನಿಲಯದ ಮೇಲಿನ ಉಗ್ರರ ಪೈಶಾಚಿಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಶಿಕ್ಷಣ ಸಂಸ್ಥೆಗಳನ್ನು ಗುರಿ ಮಾಡುವುದು ಹೀನಕೃತ್ಯವಾಗಿದೆ. ಶಾಂತಿ ಮತ್ತು ಸುರಕ್ಷತೆಯಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಕ್ಕು ಹೊಂದಿದ್ದಾರೆ. ಘಟನೆಯಲ್ಲಿ ಮೃತಪಟ್ಟವರು ಹಾಗೂ ಅವರ ಕುಟುಂಬ ಸದಸ್ಯರಿಗೆ ತೀವ್ರ ರೀತಿಯ ಸಂತಾಪ ವ್ಯಕ್ತಪಡಿಸುವುದಾಗಿ ಅವರು ಬರೆದುಕೊಂಡಿದ್ದಾರೆ.

ಅಪ್ಘಾನ್ ಮತ್ತು ಇರಾನಿನ ಅಧಿಕಾರಿಗಳು ವಿಶ್ವವಿದ್ಯಾನಿಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುತ್ತಿದ್ದಾಗ ಸ್ಪೋಟ ಮತ್ತು ಗುಂಡಿನ ದಾಳಿ ನಡೆದಿದೆ. ಬಲವಂತದಿಂದ ವಿದ್ಯಾರ್ಥಿಗಳನ್ನು ಅಲ್ಲಿಂದ ತೆರವುಗೊಳಿಸಲಾಯಿತು  ಎಂದು ಟೊಲೊ ನ್ಯೂಸ್ ಆರಂಭದಲ್ಲಿಯೇ ವರದಿ ಮಾಡಿತ್ತು. ಈ ಘಟನೆ ಬಗ್ಗೆ ಯಾವುದೇ ಗುಂಪು ಹೊಣೆ ಹೊತ್ತುಕೊಂಡಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com