ವಿಯೆನ್ನಾದಲ್ಲಿ ಭಯೋತ್ಪಾದಕ ದಾಳಿಗೆ 5 ಮಂದಿ ಸಾವು: ಐಎಸ್ ಬೆಂಬಲಿಗರಿಂದ ದಾಳಿ

ವಿಯೆನ್ನಾದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೆ ಬರುವುದಕ್ಕೂ ಕೆಲವೇ ಗಂಟೆಗಳ ಮುನ್ನ ಭಯೋತ್ಪಾದಕ ದಾಳಿ ನಡೆದಿದ್ದು 5 ಮಂದಿ ಸಾವನ್ನಪ್ಪಿದ್ದು 15 ಮಂದಿಗೆ ಗಾಯಗಳುಂಟಾಗಿವೆ.
ವಿಯೆನ್ನಾದಲ್ಲಿ ಭಯೋತ್ಪಾದಕ ದಾಳಿಗೆ 5 ಮಂದಿ ಸಾವು: ಐಎಸ್ ಬೆಂಬಲಿಗರಿಂದ ದಾಳಿ
ವಿಯೆನ್ನಾದಲ್ಲಿ ಭಯೋತ್ಪಾದಕ ದಾಳಿಗೆ 5 ಮಂದಿ ಸಾವು: ಐಎಸ್ ಬೆಂಬಲಿಗರಿಂದ ದಾಳಿ
Updated on

ವಿಯೆನ್ನಾ: ವಿಯೆನ್ನಾದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೆ ಬರುವುದಕ್ಕೂ ಕೆಲವೇ ಗಂಟೆಗಳ ಮುನ್ನ ಭಯೋತ್ಪಾದಕ ದಾಳಿ ನಡೆದಿದ್ದು 5 ಮಂದಿ ಸಾವನ್ನಪ್ಪಿದ್ದು 15 ಮಂದಿಗೆ ಗಾಯಗಳುಂಟಾಗಿವೆ.

ವಿಯೆನ್ನಾದ ಹೃದಯ ಭಾಗದಲ್ಲಿ ಈ ದಾಳಿ ನಡೆದಿದೆ ಎಂದು ಆಸ್ಟ್ರಿಯಾದ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ಗೃಹ ಸಚಿವ ಕಾರ್ಲ್ ನೆಹಮ್ಮರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಅಸುನೀಗಿದ್ದು, ಶಂಕಿತ, ಬಂದೂಕುಧಾರಿ ಉಗ್ರನನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

ಐಎಸ್ ನ ಬೆಂಬಲಿಗರು ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ. 

ವಿಯೆನ್ನಾದ ಜನತೆಗೆ ಮನೆಯಲ್ಲಿಯೇ ಇರಲು ಸೂಚನೆ ನೀಡಲಾಗಿದೆ. ಗಾಯಗೊಂಡವರ ಪೈಕಿ ಓರ್ವ ಪೊಲೀಸ್ ಅಧಿಕಾರಿಯೂ ಇದ್ದು,  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com