ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಪೆನ್ಸಿಲ್ವೇನಿಯಾದಲ್ಲಿ ಬೈಡನ್ ಮುನ್ನಡೆ, ಜಾರ್ಜಿಯಾದಲ್ಲಿ ಮರು ಎಣಿಕೆ

ಜಗತ್ತಿನಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಪೆನ್ಸಿಲ್ವೇನಿಯಾ, ಜಾರ್ಜಿಯಾ, ನೆವಾಡ ಮತ್ತು ಅರಿಜೋನಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ. ಆದರೆ, ಜಾರ್ಜಿಯಾ ರಾಜ್ಯದಲ್ಲಿ ಮತಗಳ ಮರು ಎಣಿಕೆಗೆ ಆದೇಶ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಾಷಿಂಗ್ಟನ್:  ಜಗತ್ತಿನಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಪೆನ್ಸಿಲ್ವೇನಿಯಾ, ಜಾರ್ಜಿಯಾ, ನೆವಾಡ ಮತ್ತು ಅರಿಜೋನಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಮುನ್ನಡೆ ಸಾಧಿಸಿದ್ದಾರೆ. ಆದರೆ, ಜಾರ್ಜಿಯಾ ರಾಜ್ಯದಲ್ಲಿ ಮತಗಳ ಮರು ಎಣಿಕೆಗೆ ಆದೇಶ ನೀಡಲಾಗಿದೆ.

ಅತ್ಯಂತ ಕಡಿಮೆ ಮತಗಳ ಅಂತರ ಇರುವುದರಿಂದ ಮತಗಳ ಮರು ಎಣಿಕೆಗೆ ಆದೇಶ ನೀಡಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಬ್ರಾಡ್ ರಾಫೆನ್ಸ್ ಪೆರ್ಗರ್ ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಹಾಗೂ ಜೋ ಬೈಡನ್ ನಡುವೆ 1.098 ಮತಗಳ ಅಂತರವಿದೆ. ಈ ಹಿನ್ನೆಲೆಯಲ್ಲಿ ಮತಗಳನ್ನು ಮರು ಎಣಿಕೆ ಮಾಡಿ ದೃಢಿಕರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಆರೋಪ ಮಾಡಿದ ನಂತರ ಫಿಲಿಡೆಲ್ಫಿಯಾ ಮತ್ತು ಜಾರ್ಜಿಯಾದಲ್ಲೂ ಜೋ ಬೈಡನ್ ಮುನ್ನಡೆಯಲ್ಲಿದ್ದು, ಅಂತಿಮ ಫಲಿತಾಂಶ ಘೋಷಣೆ ವಿಳಂಬವಾಗುವುದು ಖಚಿತವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com