
ಬೊಸ್ಟೊನ್: ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ಮತ್ತೊಂದು ಹಂತಕ್ಕೆ ತಲುಪಿದೆ. ಸಾಂಕ್ರಾಮಿಕ ಜಗತ್ತಿನಲ್ಲಿ ಕಾಣಿಸಿಕೊಂಡ ನಂತರ ಇದುವರೆಗೆ 50 ಮಿಲಿಯನ್ ಜನರು ಸೋಂಕಿತರಾಗಿದ್ದಾರೆ.
ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ವರದಿ ಪ್ರಕಾರ 50.2 ಮಿಲಿಯನ್ ಗಿಂತಲೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ, 1.2 ಮಿಲಿಯನ್ ಗಿಂತಲೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ನಿನ್ನೆ ವರದಿ ಕೊಟ್ಟಿದೆ.
ಅಮೆರಿಕ ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ 4ರಷ್ಟು ಹೊಂದಿದ್ದು, ಇದುವರೆಗೆ 9.8 ಮಿಲಿಯನ್ ಗಿಂತಲೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ ಮತ್ತು 2 ಲಕ್ಷದ 37 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಜಾನ್ ಹಾಪ್ ಕಿನ್ಸ್ ವರದಿ ನೀಡಿದೆ. ಅಮೆರಿಕ ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಕೊರೋನಾ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.
Advertisement