ವಿದೇಶ

ಅಮೆರಿಕದಲ್ಲಿ ಕೊರೋನಾ ವೈರಸ್ ರುದ್ರ ನರ್ತನ: ಒಂದೇ ದಿನ 1.5 ಲಕ್ಷ ಹೊಸ ಸೋಂಕು ಪ್ರಕರಣಗಳು ಪತ್ತೆ

ಅಮೆರಿಕದಲ್ಲಿ ಕೊರೋನಾ ವೈರಸ್ ರುದ್ರ ನರ್ತನ: ಒಂದೇ ದಿನ 1.5 ಲಕ್ಷ ಹೊಸ ಸೋಂಕು ಪ್ರಕರಣಗಳು ಪತ್ತೆ
ಕೊರೊನಾ ಸೋಂಕು
Published On :

ವಾಷಿಂಗ್ಟನ್: ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಅಮೆರಿಕದಲ್ಲಿ ನಿನ್ನೆ ಒಂದೇ ದಿನ ಬರೊಬ್ಬರಿ 1,50,000  ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೊರೋನಾ ವೈರಸ್ ಸೋಂಕು ಪ್ರಸರಣ ಆರಂಭವಾದ ದಿನದಿಂದ ಈವರೆಗೂ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಒಂದು ಲಕ್ಷದ ಆಸುಪಾಸಿನಲ್ಲಿದ್ದ ಹೊಸ ಸೋಂಕಿತರ ಪ್ರಮಾಣ ಇದೀಗ ಏಕಾಏಕಿ 1.50 ಲಕ್ಷ  ಗಡಿ ದಾಟಿದ್ದು ಸೋಂಕು ನಿಯಂತ್ರಣದಲ್ಲಿಲ್ಲ ಎಂಬುದನ್ನು ಖಾತ್ರಿ ಪಡಿಸಿವೆ.

ಕಳೆದ ಇಡೀ ವಾರ ಅಮೆರಿಕದಲ್ಲಿ ನಿತ್ಯ 1 ಲಕ್ಷಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿತ್ತು. ಕಳೆದ 9 ದಿನಗಳ ಪೈಕಿ 6  ದಿನಗಳ ದಾಖಲಾದ ದೈನಂದಿನ ಹೊಸ ಸೋಂಕು ಪ್ರಕರಣಗಳು ಈ ಹಿಂದಿನ ಎಲ್ಲ ದಾಖಲೆಗಳನ್ನೂ ಹಿಂದಿಕ್ಕಿದ್ದವು. ಕೇವಲ ಹೊಸ ಸೋಂಕು  ಪ್ರಕರಣಗಳು ಮಾತ್ರವಲ್ಲ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ ಅಮೆರಿಕ ದಾಖಲೆ ಬರೆದಿದ್ದು, ನಿನ್ನೆ ಒಂದೇ ದಿನ 67,096 ಮಂದಿ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಮೂರನೇ ಅತ್ಯಂತ ಗರಿಷ್ಟ ಸಂಖ್ಯೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಕೊರೋನಾ ಸಾವಿನ ಪ್ರಮಾಣದಲ್ಲೂ ಅಮೆರಿಕ ಅಗ್ರ ಸ್ಥಾನದಲ್ಲಿದ್ದು, ಪ್ರತೀ ದಿನ ಸರಾಸರಿ 1 ಸಾವಿರ ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ, ಈ ಕುರಿತು ಮಾತನಾಡಿರುವ ಇಲಿನಾಯ್ಸ್ ಗವರ್ನರ್ ಜೆಬಿ ಪ್ರಿಟ್ಜ್ಕರ್ ಅವರು ಸ್ಟೇ ಅಟ್ ಹೋಮ್ ಆದೇಶ ಜಾರಿಮಾಡುವ ಸಾಧ್ಯತೆ  ಇದೆ ಎಂದು ಹೇಳಿದ್ದಾರೆ. ಕಳೆದ ವಾರ ಇಲ್ಲಿ 75 ಸಾವಿರ ಹೊಸ ಸೋಂಕು ಪ್ರಕರಣಗಳು ದಾಖಲಾಗಿತ್ತು.   
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.