

ವಾಷಿಂಗ್ಟನ್: ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,117,430ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.
ಸದ್ಯ, ವಿಶ್ವದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 40,333,146ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 1,117,430ಕ್ಕೆ ಏರಿಕೆಯಾಗಿದೆ ಎಂದು ವಿಶ್ವವಿದ್ಯಾಲಯದ ಸಿಸ್ಟಮ್ಸ್ ಸೈನ್ಸ್ ಮತ್ತು ಇಂಜನಿಯರಿಂಗ್ ಕೇಂದ್ರ ತನ್ನ ನವೀಕೃತ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದೆ.
40,333,146 ಮಂದಿ ಒಟ್ಟಾರೆ ಸೋಂಕಿತರ ಪೈಕಿ 30,353,355 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 9,172,189 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ಪಟ್ಟಿಯಲ್ಲಿ ಭಾರತದ ಮೊದಲ ಸ್ಥಾನದಲ್ಲಿದ್ದು, ಭಾರತದಲ್ಲಿ ಈ ವರೆಗೂ 66,63,608 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 7,72,055ರಷ್ಟು ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಅಮೆರಿಕಾದಲ್ಲಿ 8,456,653 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 225,222 ಮಂದಿ ಸಾವನ್ನಪ್ಪಿದ್ದಾರೆ.