ಅಭಿನಂದನ್ ರನ್ನು ತಕ್ಷಣ ಬಿಡುಗಡೆ ಮಾಡಿ, ಇಲ್ಲಾಂದ್ರೆ ಭಾರತ ದಾಳಿ ಮಾಡುತ್ತದೆ ಎಂದು ಬೇಡಿಕೊಂಡಿದ್ದರು ಖುರೇಷಿ, ಜ.ಬಜ್ವ!

ಕಳೆದ ವರ್ಷ 2019ರ ಫೆಬ್ರವರಿಯಲ್ಲಿ ಬಂಧಿತರಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪರಿಪರಿಯಾಗಿ ಕೇಳಿಕೊಂಡರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜ. ಖಮರ್ ಜಾವೇದ್ ಬಜ್ವಾ ಅವರ ಕಾ
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಪಾಕಿಸ್ತಾನದಿಂದ ಬಿಡುಗಡೆಯಾಗಿ ಬಂದಿದ್ದ ಸಂದರ್ಭ
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಪಾಕಿಸ್ತಾನದಿಂದ ಬಿಡುಗಡೆಯಾಗಿ ಬಂದಿದ್ದ ಸಂದರ್ಭ

ಇಸ್ಲಾಮಾಬಾದ್: ಕಳೆದ ವರ್ಷ 2019ರ ಫೆಬ್ರವರಿಯಲ್ಲಿ ಬಂಧಿತರಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪರಿಪರಿಯಾಗಿ ಕೇಳಿಕೊಂಡರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜ. ಖಮರ್ ಜಾವೇದ್ ಬಜ್ವಾ ಅವರ ಕಾಲು ಭಯದಿಂದ ನಡುಗಿ ಹೋಗಿತ್ತು ಎಂದು ಅಲ್ಲಿನ ಸಂಸದರೊಬ್ಬರು ಹೇಳಿರುವುದು ವ್ಯಾಪಕವಾಗಿ ಸುದ್ದಿಯಾಗಿದೆ.

ನ್ಯಾಷನಲ್ ಅಸೆಂಬ್ಲಿಯಲ್ಲಿ ಮಾಡಿರುವ ಭಾಷಣದಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್(ಪಿಎಂಎಲ್-ಎನ್) ನಾಯಕ ಆಯಾಝ್ ಸಾದಿಖ್, ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪ್ರಮುಖ ಸಭೆಯೊಂದನ್ನು ಕರೆದು ಸರ್ಕಾರ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಅದೇ ದಿನ ರಾತ್ರಿ 9 ಗಂಟೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡಬಹುದು ಎಂದು ಎಚ್ಚರಿಕೆ ನೀಡಿದ್ದರು ಎಂದಿದ್ದಾರೆ. ಈ ವಿಡಿಯೊ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಕಳೆದ ವರ್ಷದ ಪುಲ್ವಾಮಾ ದಾಳಿ, ನಂತರ ಭಾರತ ನಡೆಸಿದ ಬಾಲಾಕೋಟ್ ವಾಯುದಾಳಿ ಚರ್ಚೆಗೆ ಬಂದಿದೆ.

ಇಮ್ರಾನ್ ಖಾನ್ ಅವರು ಭಾಗವಹಿಸಲು ನಿರಾಕರಿಸಿದ್ದ ಸಭೆಯಲ್ಲಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ, ದಯವಿಟ್ಟು ಅಭಿನಂದನ್ ಅವರನ್ನು ಬಿಡುಗಡೆ ಮಾಡಿ, ಇಲ್ಲದಿದ್ದರೆ ಭಾರತ ಪಾಕಿಸ್ತಾನ ಮೇಲೆ ಇಂದು ರಾತ್ರಿ 9 ಗಂಟೆಗೆ ದಾಳಿ ಮಾಡುವುದು ಖಂಡಿತ ಎಂದು ಒತ್ತಾಯಿಸಿದ್ದರು. ಆಗ ಸೇನಾ ಮುಖ್ಯಸ್ಥ ಜನರಲ್ ಬಜ್ವಾ ಅವರ ಕಾಲು ನಡುಗಿ ಹೋಗಿತ್ತು ಎಂದಿದ್ದಾರೆ.

ವಿದೇಶಾಂಗ ಸಚಿವರ ಜೊತೆ ಅಂದಿನ ಸಭೆಯಲ್ಲಿ ಪಿಪಿಪಿ, ಪಿಎಂಎಲ್-ಎನ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವ ಕೂಡ ಇದ್ದು ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡರು. ವಿರೋಧ ಪಕ್ಷ ಸರ್ಕಾರವನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸುತ್ತಾ ಬಂದಿತ್ತು, ಅದು ಅಭಿನಂದನ್ ವರ್ತಮಾನ್ ಬಿಡುಗಡೆ ವಿಷಯದಲ್ಲಿ ಸಹ ಎಂದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಸಿಆರ್ ಪಿಎಫ್ ಬೆಂಗಾವಲು ಪಡೆ ವಾಹನದ ಮೇಲೆ ನಡೆದ ಆತ್ಮಹತ್ಯಾ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದರಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿ ಭಾರತೀಯ ವಾಯುಪಡೆ ಕಳೆದ ವರ್ಷ ಫೆಬ್ರವರಿಯಲ್ಲಿ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ತಾಣಗಳ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಅಪಾರ ಉಗ್ರರು ಮೃತಪಟ್ಟಿದ್ದರು. ದಾಳಿ ವೇಳೆ ಪಾಕಿಸ್ತಾನದ ಪ್ರಾಂತ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ವಿಂಗ್ ಕಮಾಂಡರ್ ವರ್ತಮಾನ್ ಅವರನ್ನು ಪಾಕಿಸ್ತಾನ ಯುದ್ಧ ವಿಮಾನ ವಶಪಡಿಸಿಕೊಂಡಿತ್ತು. ಈ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ಸಹ ಭಾರತ ಹೊಡೆದುರುಳಿಸಿತ್ತು.

ನಂತರ ಪಾಕಿಸ್ತಾನ ವಿಂಗ್ ಕಮಾಂಡರ್ ವರ್ತಮಾನ್ ಅವರನ್ನು ಬಿಡುಗಡೆ ಮಾಡಿತ್ತು. ಅವರು ಅತ್ತಾರಿ-ವಾಘಾ ಗಡಿ ಮೂಲಕ ಮಾರ್ಚ್ 1, 2019ರಂದು ಬಿಡುಗಡೆ ಹೊಂದಿದ್ದರು. ನಂತರ ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಅವರಿಗೆ ವೀರಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com