ಪ್ರಧಾನಿ ಮೋದಿ ನನ್ನ ಸ್ನೇಹಿತ, ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ: ಅಮೆರಿಕಾ ಅಧ್ಯಕ್ಷ ಟ್ರಂಪ್

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನ್ನ ಸ್ನೇಹಿತರಾಗಿದ್ದು, ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಭಾರತೀಯರು ಓರ್ವ ಶ್ರೇಷ್ಠ ನಾಯಕ ಮತ್ತು ಶ್ರೇಷ್ಠ ವ್ಯಕ್ತಿಯನ್ನು ಪಡೆದಿದ್ದೀರಿ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್
Updated on: 

ವಾಷಿಂಗ್ಟನ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನ್ನ ಸ್ನೇಹಿತರಾಗಿದ್ದು, ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಭಾರತೀಯರು ಓರ್ವ ಶ್ರೇಷ್ಠ ನಾಯಕ ಮತ್ತು ಶ್ರೇಷ್ಠ ವ್ಯಕ್ತಿಯನ್ನು ಪಡೆದಿದ್ದೀರಿ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 

2021ರ ಫೆಬ್ರವರಿ ತಿಂಗಳಿನಲ್ಲಿ ಟ್ರಂಪ್ ಅವರು ಪತ್ನಿ ಮೆಲಾನಿಯಾ ಅವರೊಂದಿಗೆ ಭಾರತಕ್ಕೆ ಭೇಟಿ ನೀಡಲಿದ್ದು, ಭೇಟಿ ಕುರಿತು ಮಾತನಾಡಿರುವ ಅವರು, ಭಾರತದಲ್ಲಿ ಆಶ್ಚರ್ಯಕರವಾದ ರೀತಿಯಲ್ಲಿ ಕಾಲವನ್ನು ಕಳೆದೆವು. ಅದ್ಭುತವಾದ ಜನರನ್ನು ನಾವು ಅಲ್ಲಿ ನೋಡಿದ್ದೇವೆ. ಅದೊಂದು ಸೋಜಿಗದ ಸ್ಥಳ, ದೇಶವಾಗಿದ್ದು, ಖಂಡಿದವಾಗಿಯು ಶ್ರೇಷ್ಠವಾಗಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಹ್ಯೂಸ್ಟನ್'ನಲ್ಲಿ ನಡೆದ ಹೌಡಿ ಮೋದಿ ಸಮಾರಂಭ ಕುರಿತು ಮಾತನಾಡಿದ ಅವರು, ನಾವು ಹ್ಯೂಸ್ಟನ್  ನಗರದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದೆವು. ಅದು ಅದ್ಭುತವಾಗಿತ್ತು. ನಾವು ಭಾರತದಿಂದ ಮತ್ತು ಪ್ರಧಾನಿ ಮೋದಿ ಅವರಿಂದ ದೊಡ್ಡ ಮಟ್ಟದ ಬೆಂಬಲವನ್ನು ಪಡೆದುಕೊಂಡಿದ್ದೇವೆ. ಭಾರತದವರು ಟ್ರಂಪ್'ಗಾಗಿ ಮತ ಚಲಾಯಿಸುತ್ತಾರೆಂದು ಎನಿಸುತ್ತಿದೆ ಎಂದೂ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com