ಜಗತ್ತಿನಾದ್ಯಂತ 3 ಕೋಟಿ ಗಡಿ ದಾಟಿದ ಕೊರೊನಾ ಸೋಂಕು ಪ್ರಕರಣಗಳು

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮಾಸ್ಕೋ: ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದಾದ್ಯಂತ ಈವರೆಗೂ 30,358,098ಮಂದಿ ಸೋಂಕಿನಿಂದ ಬಳಲುತ್ತಿದ್ದು, 950,636 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ. 

30,358,098ಮಂದಿ ಸೋಂಕಿತರ ಪೈಕಿ  22,046,488 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 7,360,974ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ 6,874,596 ಸೋಂಕಿತರಿದ್ದು, ಈವರೆಗೆ 202,213 ಮಂದಿ ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನಕ್ಕೆ ತಲುಪಿರುವ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,214,677ಕ್ಕೆ ತಲುಪಿದ್ದು, 84,404ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ ಸೋಂಕಿತರ ಸಂಖ್ಯೆ 4,457,443ಕ್ಕೆ ಏರಿಕೆಯಾಗಿದ್ದು, 135,031 ಮಂದಿ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com