ವಿಶ್ವದಾದ್ಯಂತ ಕೊರೋನಾ ಮಹಾಮಾರಿಗೆ 55 ಸಾವಿರ ಬಲಿ, 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಇದೀಗ 55 ಸಾವಿರ ಬಲಿ ಪಡೆದಿದ್ದು ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಇದೀಗ 55 ಸಾವಿರ ಬಲಿ ಪಡೆದಿದ್ದು ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. 

ಇಟಲಿ ಬಳಿಕ ಇದೀಗ ಅಮೆರಿಕದಲ್ಲೂ ಕೊರೋನಾ ತನ್ನ ರೌದ್ರಾವತಾರ ತೋರಿಸುತ್ತಿದೆ. ಒಂದೇ ದಿನ 1,169 ಮಂದಿ ಸಾವನ್ನಪ್ಪಿದ್ದು ಇದು ಕೊರೋನಾ ದಿನದ ಸಾವಿನ ಇತಿಹಾಸದಲ್ಲೇ ದಾಖಲೆಯಾಗಿದೆ. 

ಜಗತ್ತಿನಾದ್ಯಂತ 10,40,664 ಮಂದಿ ಸೋಂಕಿಗೆ ತುತ್ತಾಗಿದ್ದರೆ ಸಾವಿನ ಸಂಖ್ಯೆ 55,191ಕ್ಕೆ ಏರಿಕೆಯಾಗಿದೆ. ಇನ್ನು 2,22,240 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com