ಕೊರೋನಾ ಕಟ್ಟಿಹಾಕಲು ಒಂದು ತಿಂಗಳು ಲಾಕ್ ಡೌನ್ ಘೋಷಿಸಿದ ಸಿಂಗಾಪುರ ಪ್ರಧಾನಿ

ಮಹಾಮಾರಿ ಕೊರೋನಾ ವೈರಸ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ನಿಯಂತ್ರಿಸಲು ಸಿಂಗಾಪುರ ಪ್ರಧಾನಿ ಲೀ ಸೀನ್ ಲೂಂಗ್ ಅವರು ಬರೋಬ್ಬರಿ ಒಂದು ತಿಂಗಳ ಕಾಲ ಲಾಕ್ ಡೌನ್ ಘೋಷಿಸಿದ್ದಾರೆ.
ಲೀ ಸೀನ್ ಲೂಂಗ್
ಲೀ ಸೀನ್ ಲೂಂಗ್

ಸಿಂಗಾಪುರ: ಮಹಾಮಾರಿ ಕೊರೋನಾ ವೈರಸ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ನಿಯಂತ್ರಿಸಲು ಸಿಂಗಾಪುರ ಪ್ರಧಾನಿ ಲೀ ಸೀನ್ ಲೂಂಗ್ ಅವರು ಬರೋಬ್ಬರಿ ಒಂದು ತಿಂಗಳ ಕಾಲ ಲಾಕ್ ಡೌನ್ ಘೋಷಿಸಿದ್ದಾರೆ.

ಸಿಂಗಾಪುರದಲ್ಲೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಏಪ್ರಿಲ್ 7ರಿಂದ ಒಂದು ತಿಂಗಳ ಕಾಲ ಶಡೌನ್ ಜಾರಿಗೊಳಿಸುತ್ತಿರುವುದಾಗಿ ಲೂಂಗ್ ಅವರು ತಿಳಿಸಿದ್ದಾರೆ.

ಒಂದು ತಿಂಗಳ ಕಾಲ ಅಗತ್ಯ ಸೇವೆ ಹೊರತುಪಡಿಸಿ ಸರ್ಕಾರಿ, ಖಾಸಗಿ ಕಚೇರಿಗಳು ಸೇರಿದಂತೆ ಎಲ್ಲವೂ ಬಂದ್ ಆಗಲಿವೆ ಎಂದು ಲೂಂಗ್ ಹೇಳಿದ್ದಾರೆ.

ಅಗತ್ಯ ಸೇವೆಗಳಾದ ಆಹಾರ, ದಿನಸಿ ಅಂಗಡಿಗಳು, ಸೂಪರ್ ಮಾರ್ಕೆಟ್, ಆಸ್ಪತ್ರೆ, ಸಾರಿಗೆ ಮತ್ತು ಪ್ರಮುಖ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಇರಲಿವೆ ಎಂದು ತಿಳಿಸಿದ್ದಾರೆ. ಅಲ್ಲದೆ ದೇಶ ಕೊನಿಡ್-19 ನಿಯಂತ್ರಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com