ಕೊರೋನಾ ಸೋಂಕು ಲಕ್ಷಣದಿಂದ ಆಸ್ಪತ್ರೆಗೆ ದಾಖಲಾದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್

ವಾರದ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಕೊರೋನಾ ಸೋಂಕು ಲಕ್ಷಣದಿಂದ ಆಸ್ಪತ್ರೆಗೆ ದಾಖಲಾದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್

ಲಂಡನ್: ವಾರದ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕೊರೋನಾ ಸೋಂಕು ಇದೆ ಎಂದು ಗೊತ್ತಾಗಿ 10 ದಿನಗಳ ನಂತರ ಕೂಡ ಅದರ ಲಕ್ಷಣ ಕಂಡುಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಂಡನ್ ನಲ್ಲಿ ಯಾವ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಬಹಿರಂಗಪಡಿಸಿಲ್ಲ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ತಿಂಗಳು 26ರಂದು ತಮಗೆ ಕೊರೋನಾ ಸೋಂಕು ತಗುಲಿದೆ ಎಂದು ಗೊತ್ತಾದ ಬಳಿಕ 55 ವರ್ಷದ ಪ್ರಧಾನಿ ಜಾನ್ಸನ್ ಲಂಡನ್ ನ ತಮ್ಮ ಡೌನಿಂಗ್ ಸೈಂಟ್ ನಿವಾಸದಲ್ಲಿ ಸ್ವ ನಿರ್ಬಂಧನದಲ್ಲಿ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com