ಕೊರೋನಾ ವೈರಸ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಐಸಿಯು ಗೆ ದಾಖಲು! 

ಕೊರೋನಾ ವೈರಸ್ ಸೋಂಕಿತ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. 
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಲಂಡನ್: ಕೊರೋನಾ ವೈರಸ್ ಸೋಂಕಿತ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. 

ಸೋಂಕಿನ ಲಕ್ಷಣಗಳು ಬೋರಿಸ್ ಜಾನ್ಸನ್ ಅವರನ್ನು ನಿರಂತರ ಬಾಧಿಸುತ್ತಿದ್ದ ಪರಿಣಾಮ ಅವರನ್ನು ಭಾನುವಾರ ಸಂಜೆ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಮಧ್ಯಾಹ್ನದ ಭೋಜನ ಅವಧಿಯಲ್ಲಿ ಬ್ರಿಟನ್ ಪ್ರಧಾನಿ ಜಾನ್ಸನ್ ತಮ್ಮ ಆರೋಗ್ಯ ಉತ್ತಮವಾಗಿದೆ ಎಂದು ಟ್ವೀಟ್ ಮಾಡಿದ್ದರು. ಆದರೆ ಅಲ್ಲಿನ ಕಾಲಮಾನ ಸಂಜೆ 7 ಗಂಟೆ ವೇಳೆಗೆ ಅವರನ್ನು ಐಸಿಯು ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. 

ಮಧ್ಯಾಹ್ನದ ನಂತರ ಬ್ರಿಟನ್ ಪ್ರಧಾನಿಗಳ ಆರೋಗ್ಯ ಹದಗೆಟ್ಟಿತ್ತು. ಅವರ ವೈದ್ಯಕೀಯ ತಂಡದ ಸಲಹೆಯ ಪ್ರಕಾರ ಬೋರಿಸ್ ಜಾನ್ಸನ್ ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿಗಳ ವಕ್ತಾರರು ಮಾಹಿತಿ ನೀಡಿದ್ದಾರೆ. 

ಪ್ರಧಾನಿಗಳಿಗೆ ಅತ್ಯಂತ ಒಳ್ಳೆಯ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿದೆ, ರಾಷ್ಟ್ರೀಯ ಆರೋಗ್ಯ ಸೇವೆಗೆ ಹಾಗೂ ಅದರ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಪ್ರಧಾನಿಗಳ ಕಾರ್ಯಾಲಯ ಹೇಳಿದೆ. 

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋರಿಸ್ ಜಾನ್ಸನ್ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com