ಕೋವಿಡ್-19: 'ಹನುಮಂತನ ಸಂಜೀವನಿ' ಹೈಡ್ರಾಕ್ಸಿಕ್ಲೋರೋಕ್ವಿನ್‌ ರಫ್ತಿಗೆ ಮೋದಿಯನ್ನು ಕೋರಿದ ಬ್ರೆಜಿಲ್ ಪ್ರಧಾನಿ!

ಮಾರಣಾಂತಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತದ ಪ್ರಯತ್ನಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ಅಂತಾರಾಷ್ಟ್ರೀಯ ಸಹಕಾರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published: 08th April 2020 05:08 PM  |   Last Updated: 08th April 2020 06:21 PM   |  A+A-


Jair Bolsonaro-modi

ಜೈರ್-ಮೋದಿ

Posted By : Vishwanath S
Source : Online Desk

ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತದ ಪ್ರಯತ್ನಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ಅಂತಾರಾಷ್ಟ್ರೀಯ ಸಹಕಾರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ಉದಾಹರಣೆ ಕೊಟ್ಟಿರುವ ಬ್ರೆಜಿಲ್ ಅಧ್ಯಕ್ಷ ಕೊರೋನಾ ವೈರಸ್ ಗೆ ರಾಮಬಾಣವಾಗಿರುವ ಹೈಡ್ರಾಕ್ಸಿಕ್ಲೋರೋಕ್ವಿನ್‌ ಅನ್ನು ರಫ್ತು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕೊರೋನಾ ವೈರಸ್ ಅಥವಾ ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಅಮೆರಿಕದ ನೇತೃತ್ವದ 30ಕ್ಕೂ ಹೆಚ್ಚು ದೇಶಗಳು ಮಲೇರಿಯಾಗೆ ನೀಡಲಾಗುವ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ರಫ್ತು ಮಾಡುವಂತೆ ಭಾರತವನ್ನು ಒತ್ತಾಯಿಸುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ, ಅಧ್ಯಕ್ಷ ಬೊಲ್ಸನಾರೊ ಅವರು ಕೋವಿಡ್ -19 ರ ಹರಡುವಿಕೆಯನ್ನು ನಿಭಾಯಿಸುವಲ್ಲಿ ಭಾರತದ ಸಹಾಯ ಮತ್ತು ಶ್ರಮವನ್ನು ಲಕ್ಷ್ಮಣನ ಜೀವ ಉಳಿಸಲು ಹಿಮಾಲಯ ಪರ್ವತ ಶ್ರೇಣಿಯಿಂದ ಸಂಜೀವನಿ ಪರ್ವತವನ್ನೇ ತಂದಿದ್ದ ಭಗವಂತ ಹನುಮಂತನ ಶ್ರಮಕ್ಕೆ ಹೋಲಿಸಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp