ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರ, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬ್ರಿಟನ್ ಪ್ರಧಾನಿ

ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಸಂಪುಟ ಸಹೋದ್ಯೋಗಿ ರಿಷಿ ಸುನಕ್ ತಿಳಿಸಿದ್ದಾರೆ. 
ಬೋರಿಸ್ ಜಾನ್ಸನ್- ರಿಷಿ ಸುನಕ್
ಬೋರಿಸ್ ಜಾನ್ಸನ್- ರಿಷಿ ಸುನಕ್

ಲಂಡನ್: ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಸಂಪುಟ ಸಹೋದ್ಯೋಗಿ ರಿಷಿ ಸುನಕ್ ತಿಳಿಸಿದ್ದಾರೆ. 

ಬ್ರಿಟನ್ ನ ಹಣಕಾಸು ಸಚಿವರಾಗಿರುವ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ರಾಷ್ಟ್ರೀಯ ಆರೋಗ್ಯ ಸೇವೆ (ಎನ್ ಹೆಚ್ಎಸ್) ನ ಸೇಂಟ್ ಥಾಮಸ್ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ರಿಷಿ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com